ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠ ಬೋಧಿಸಿ : ಎಡಿಸಿ ಕುಮಾರಸ್ವಾಮಿ

ಚಿತ್ರದುರ್ಗ : ನಿಮ್ಮಲ್ಲಿರುವ ಕೌಶಲ್ಯ, ಪರಿಣಿತಿಯನ್ನು ಬಳಸಿ ಶಾಲೆಯಲ್ಲಿ ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠ ಬೋಧಿಸಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಶಿಕ್ಷಕರುಗಳಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲೆಯ ಇಂಗ್ಲಿಷ್ ಶಿಕ್ಷಕರುಗಳ ಕ್ಲಬ್ ಸಹಯೋಗದೊಂದಿಗೆ ತ.ರಾ.ಸು.ರಂಗಮಂದಿರದಲ್ಲಿ ಜಿಲ್ಲೆಯ ಪ್ರೌಢಶಾಲೆಯ ಆಂಗ್ಲ ಶಿಕ್ಷಕರುಗಳಿಗೆ ಶುಕ್ರವಾರ ಏರ್ಪಡಿಸಲಾಗಿದ್ದ ಕಾರ್ಯಾಗಾರ ಉದ್ಗಾಟಿಸಿ ಮಾತನಾಡಿದರು.

ಶಿಕ್ಷಕರುಗಳ ಮೇಲೆ ಒತ್ತಡವಿದೆ ನಿಜ. ಆದರೆ ಎಂದಿಗೂ ನೀವುಗಳು ಒತ್ತಡ ಅಂದುಕೊಳ್ಳಬಾರದು. ಸಮಾಜದಲ್ಲಿ ಅತ್ಯಂತ ತೃಪ್ತಿ ಕೊಡುವ ವೃತ್ತಿ ಯಾವುದಾದರೂ ಇದ್ದರೆ ಅದು ಶಿಕ್ಷಕ ವೃತ್ತಿ ಮಾತ್ರ. ಸಂಸ್ಕಾರಯುತ ಮಕ್ಕಳನ್ನು ಸಮಾಜಕ್ಕೆ ಕೊಡುವ ಅವಕಾಶ ಶಿಕ್ಷಕರುಗಳ ಕೈಯಲ್ಲಿದೆ. ಮಕ್ಕಳು ಹತ್ತನೆ ತರಗತಿಗೆ ಬಂದಾಗ ಮಾತ್ರ

ಫಲಿತಾಂಶ ಸುಧಾರಣೆಯತ್ತ ಗಮನ ಕೊಡುವ ಬದಲು ಎಂಟನೆ ತರಗತಿಯಿಂದಲೆ ಮಕ್ಕಳನ್ನು ಪರೀಕ್ಷೆಗೆ ತಯಾರು ಮಾಡುವ ಕೆಲಸವಾಗಬೇಕು. ಎಲ್ಲಾ ಮಕ್ಕಳಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆಯಿರುತ್ತದೆ. ಅದನ್ನು ಗುರುತಿಸುವ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರುಗಳ ಮೇಲಿದೆ ಎಂದು ಹೇಳಿದರು.

ಗಣಿತ ಹೊರತುಪಡಿಸಿದರೆ ಎರಡನೆಯದು ಇಂಗ್ಲಿಷ್ ಕಷ್ಠ ಎನ್ನುವ ಭಯವನ್ನು ಮಕ್ಕಳ ಮನಸ್ಸಿನಿಂದ ತೆಗೆಯಬೇಕಿರುವುದರಿಂದ ಶಿಕ್ಷಕರುಗಳು ಮಕ್ಕಳ

ಮನೋಸಾಮಥ್ರ್ಯ ಅರಿತು ಮನಸ್ಸಿಗೆ ನಾಟುವ ರೀತಿಯಲ್ಲಿ ಇಂಗ್ಲಿಷ್ ಬೋಧಿಸಬೇಕು. ಪದ, ವಾಕ್ಯ, ವ್ಯಾಕರಣದ ಜೊತೆ ಸುಲಭವಾಗಿ ಇಂಗ್ಲಿಷ್ ಭಾಷೆಯನ್ನು ಮಕ್ಕಳಿಗೆ ಕಲಿಸಬೇಕಿದೆ. ಗುಣಮಟ್ಟದ ಶಿಕ್ಷಣದಿಂದ ಮಾತ್ರ ಫಲಿತಾಂಶದಲ್ಲಿ ಸುಧಾರಣೆ ಸಾಧ್ಯ. ಇಂದಿನ ದಿನಗಳಲ್ಲಿ ಬರವಣಿಗೆಯೇ ಮಕ್ಕಳಲ್ಲಿ ಕಡಿಮೆಯಾಗುತ್ತಿದೆ. ಶಿಕ್ಷಣದ ಜೊತೆ ಸೃಜನಶೀಲ ಕೌಶಲ್ಯವನ್ನು ಮಕ್ಕಳಿಗೆ ಕಲಿಸಬೇಕಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಡೆ ಹೆಚ್ಚಿನ ಗಮನ ಕೊಡುವಂತೆ ಶಿಕ್ಷಕರುಗಳಿಗೆ ಅಪರ ಜಿಲ್ಲಾಧಿಕಾರಿ ಕರೆ ನೀಡಿದರು.

Edited By : PublicNext Desk
Kshetra Samachara

Kshetra Samachara

03/01/2025 05:01 pm

Cinque Terre

1.6 K

Cinque Terre

0