ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಪದಾಧಿಕಾರಿಗಳ ಹುದ್ದೆಗೆ ಚುನಾವಣೆ ನಡೆಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ. ಇದರ ಬೆನ್ನಲ್ಲೇ ರಾಜ್ಯಾಧ್ಯಕ್ಷ ಹುದ್ದೆಯಲ್ಲಿರುವ ಬಿ.ವೈ ವಿಜಯೇಂದ್ರಗೆ ತಳಮಳ ಶುರುವಾಗಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿರಬೇಕಾದ್ರೆ ವಿಜಯೇಂದ್ರ ಕೂಡ ಚುನಾವಣೆ ಎದುರಿಸಬೇಕಾಗಿದೆ.
ಕರ್ನಾಟಕದಲ್ಲಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ. ಸದ್ಯ ಬೂತ್‌ಮಟ್ಟದ ಚುನಾವಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಂಡಲ, ಜಿಲ್ಲಾ ಹಾಗೂ ರಾಜ್ಯ ಘಟಕಕ್ಕೂ ಚುನಾವಣೆ ನಡೆಯಲಿದೆ.
ಸದ್ಯ ಬಿ.ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧಕ್ಷರಾಗಿ ಒಂದು ವರ್ಷ ಒಂದು ತಿಂಗಳಷ್ಟೇ ಕಳೆದಿದೆ. ಅದಾಗಲೇ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಎದುರಿಸಬೇಕಾಗಿದೆ. ಮೊದಲು ಜಿಲ್ಲಾ ಮಟ್ಟದ ಅಧ್ಯಕ್ಷರುಗಳ ಆಯ್ಕೆ ನಡೆದು ಜಿಲ್ಲಾ ಮಟ್ಟದ ಅಧ್ಯಕ್ಷರು ರಾಜ್ಯಮಟ್ಟದ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ.
PublicNext
03/01/2025 05:27 pm