ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವರೂರು ಬಳಿ ಹಿಟ್ & ರನ್ - ರಸ್ತೆಯುದ್ದಕ್ಕೂ ಬಿದ್ದ ದೇಹದ ಭಾಗಗಳು

ಹುಬ್ಬಳ್ಳಿ: ಬೆಂಗಳೂರು - ಪುಣೆ ರಾಷ್ಟ್ರೀಯ ಹೆದ್ದಾರಿಯ ವರೂರು ಬಳಿಯಲ್ಲಿ ವಾಹನವೊಂದು ಹರಿದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಸುಮಾರು 50ರಿಂದ 55 ವರ್ಷ ವ್ಯಕ್ತಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಭಾರಿ ಗಾತ್ರದ ವಾಹನ ವ್ಯಕ್ತಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಮಾಡಿ ಪರಾರಿಯಾದ ವಾಹನದ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

03/01/2025 06:36 pm

Cinque Terre

55.51 K

Cinque Terre

0

ಸಂಬಂಧಿತ ಸುದ್ದಿ