ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಾಕೃತಿಕ ವಿಕೋಪ ನಿರ್ವಹಣೆ ಅಗತ್ಯ ಮುನ್ನೆಚ್ಚರ ಬಗ್ಗೆಮಾಹಿತಿ ಕಾರ್ಯಗಾರ

ಮಡಿಕೇರಿ: ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಾಗಾರವು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕರಾದ ಡಾ.ಪರಮೇಶ ಜೆ.ಆರ್. ಅವರು ಮಾಹಿತಿ ನೀಡಿ ಹವಾಮಾನ ಇಲಾಖೆಯು ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದ್ದಲ್ಲಿ ಪ್ರಾಕೃತಿಕ ವಿಕೋಪವನ್ನು ತಡೆಯಬಹುದಾಗಿದೆ ಎಂದರು.

ಸ್ಥಳೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಜೊತೆ ಸಮನ್ವಯತೆ ಸಾಧಿಸುವುದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿ, ಮಾಹಿತಿ ಹಂಚಿಕೊಳ್ಳುವುದು, ಹಾಗೆಯೇ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚು ಹೆಚ್ಚು ಮಾಹಿತಿ ವಿನಿಮಯ ಮಾಡಿಕೊಳ್ಳುವುದು. ಹೀಗೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಕಂದಾಯ, ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ ಹಾಗೆಯೇ ಸೆಸ್ಕ್, ಅರಣ್ಯ, ಪಂಚಾಯತ್ ರಾಜ್, ಲೋಕೋಪಯೋಗಿ, ಪೌರಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹೀಗೆ ಪ್ರತಿಯೊಂದು ಇಲಾಖೆಯು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ವಿಕೋಪವನ್ನು ತಡೆದು ಹಲವು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ಡಾ.ಪರಮೇಶ ಅವರು ಹೇಳಿದರು.

Edited By : PublicNext Desk
Kshetra Samachara

Kshetra Samachara

03/01/2025 06:41 pm

Cinque Terre

740

Cinque Terre

0