ಕೋಲಾರ : ಪತ್ರಕರ್ತರಿಗೆ ವೃತ್ತಿ ಬದ್ಧತೆ ಇದ್ದರೆ ಪ್ರಶಸ್ತಿಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ. ಇಂಥ ಸಂದರ್ಭದಲ್ಲಿ ಯಾವುದೇ ಲಾಬಿ ಅಗತ್ಯ ಇರುವುದಿಲ್ಲ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಹೇಳಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿರುವ ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್ ಹಾಗೂ ಪ್ರಜಾವಾಣಿ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರಿಗೆ ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ಜಿಲ್ಲೆಗೆ ಅಕಾಡೆಮಿ ಪ್ರಶಸ್ತಿಗಳು ಹೆಚ್ಚಾಗಿ ಸಿಗುತ್ತಿವೆ. ಜಿಲ್ಲೆಯ ಮೂವರಿಗೆ ಲಭಿಸಿರುವ ಈ ಪುರಸ್ಕಾರಗಳು ಯುವ ಪತ್ರಕರ್ತರಿಗೆ ಸ್ಫೂರ್ತಿ ಆಗಬೇಕು. ತಾವೂ ಅವರ ಮಟ್ಟಕ್ಕೆ ಬೆಳೆಯಬೇಕೆಂಬ ಇಚ್ಛಾಶಕ್ತಿ ಬೆಳೆಸಿಕೊಳ್ಳಬೇಕು ಎಂದರು. ಹಿರಿಯ ಪತ್ರಕರ್ತ ಮಹಮದ್ ಯೂನಸ್ ಮಾಧ್ಯಮ ಅಕಾಡೆಮಿ ಸದಸ್ಯರಾದ ನಂತರ ಕೋಲಾರದ ಪತ್ರಕರ್ತರೂ ಸೇರಿದಂತೆ ಗ್ರಾಮೀಣ ಪತ್ರಕರ್ತರಿಗೂ ಸಹ ಅಕಾಡೆಮಿ ಪ್ರಶಸಿಗಳು ಲಭಿಸುತ್ತಿವೆ ಎಂದರು.
Kshetra Samachara
03/01/2025 07:10 pm