ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಳೇನಹಟ್ಟಿಯ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಶುಕ್ರವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸುಮಾರು 3 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಕಾಮಗಾರಿ ಮಂಜೂರಾಗಿದ್ದು, ನಿಗದಿತ ಸಮಯದಲ್ಲಿ, ಸ್ಥಳೀಯರ ಸಲಹೆ ಪಡೆದು ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಮಂಗೇಶ ನಾಯ್ಕ, ರಾಜು ನಾಯ್ಕ್, ಬಸು ಅಣ್ಣ, ಪಿಡಿಓ ಶೋಭಾ, ಅಡಿವೆಪ್ಪ ಗೌರನ್ನವರ, ಅನೇಕ ಮುಖಂಡರು ಉಪಸ್ಥಿತರಿದ್ದರು.
Kshetra Samachara
03/01/2025 07:22 pm