ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರಿಯಾಂಕ್ ಖರ್ಗೆ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಯವರ ರಾಜಿನಾಮೆಗೆ ಒತ್ತಾಯಿಸಿ ನಗರದ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.

ಗುತ್ತಿಗೆದಾರ ಸಚಿನ್ ಪಾಂಚಲ್‌ರವರ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಮಂತ್ರಿಗಳಾದ ಪ್ರಿಯಾಂಕ್ ಖರ್ಗೆರವರ ರಾಜೀನಾಮೆಯನ್ನು ಒತ್ತಾಯಿಸಿತ್ತು. ಪ್ರತಿಭಟನೆ ವೇಳೆ ಪೋಸ್ಟರ್ ಅಭಿಯಾನವನ್ನು ನಡೆಸಿತ್ತು‌. ಪ್ರತಿಭಟನೆಯಲ್ಲಿ ಶಾಸಕ ವೇವವ್ಯಾಸ್ ಕಾಮತ್ ಭಾಗಿಯಾಗಿದ್ದರು.

ಪ್ರತಿಭಟನಾಕಾರರು ರಸ್ತೆ ತಡೆಗೆ ಯತ್ನಿಸಿದ ವೇಳೆ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.

Edited By : Suman K
PublicNext

PublicNext

03/01/2025 07:35 pm

Cinque Terre

54.21 K

Cinque Terre

1