ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಕ್ಕಳ ರಕ್ಷಣಾ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ- ಡಾ.ತಿಪ್ಪೇಸ್ವಾಮಿ

ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಸಹಭಾಗೀದಾರರಿಗೆ ಇಂದು ಉಡುಪಿ ತಾಪಂ ಸಭಾಂಗಣದಲ್ಲಿ ಆಯೋಜಿಸಲಾದ ಪೋಕ್ಸೋ, ಬಾಲ್ಯ ವಿವಾಹ, ಆರ್‌ಟಿಇ, ಭ್ರೂಣಹತ್ಯೆ ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ್ ಪಿ.ಆ‌ರ್. ಮಾತನಾಡಿ, ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಪ್ರಬುದ್ಧತೆ ಹೊಂದಿಲ್ಲದೇ ಇದ್ದಾಗ ತನಗೆ ಸಂಬಂಧಿಸಿದ ವಿಚಾರಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಮನೋಶಕ್ತಿ ಅವರಲ್ಲಿ ಇರುವುದಿಲ್ಲ. ಅಂತಹ ಮಕ್ಕಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಜಾರಿಯಲ್ಲಿರುವ ಕಾಯಿದೆಗಳ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಹೊಂದಿರಬೇಕು. ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ಆಯೋಗಗಳು ಕೆಲಸ ನಿರ್ವಹಿಸುತ್ತಿದ್ದು ಕಾಯಿದೆಗಳನ್ನು ಅನುಷ್ಠಾನ ಮಾಡುವಾಗ ಸೂಕ್ಷ್ಮ ರೀತಿಯಲ್ಲಿ ವರ್ತಿಸಬೇಕು ಎಂದರು.

Edited By : PublicNext Desk
Kshetra Samachara

Kshetra Samachara

03/01/2025 07:58 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ