ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಹುತಾತ್ಮ ಯೋಧ ಅನೂಪ್ ಪೂಜಾರಿ ಕುಟುಂಬಕ್ಕೆ ನಾಡೋಜ ಡಾ.ಜಿ.ಶಂಕರ್ ನೆರವು

ಕುಂದಾಪುರ: ಅಪಘಾತದಿಂದ ಹುತಾತ್ಮರಾದ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ನಿವಾಸಕ್ಕೆ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಅವರು ಮೃತರ ಪತ್ನಿ ಮಂಜುಶ್ರೀ ಅವರಿಗೆ ಒಂದು ಲಕ್ಷ ರೂ. ಹಾಗೂ ತಾಯಿ ಚಂದು ಪೂಜಾರಿ ಅವರಿಗೆ 50 ಸಾವಿರ ರೂ. ಮೊತ್ತದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ದಯಾನಂದ್, ಬೀಜಾಡಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್‌ ಪೂಜಾರಿ, ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ್ ಕುಂದರ್, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/01/2025 08:03 pm

Cinque Terre

2.13 K

Cinque Terre

0