ಸರಕಾರ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರನ್ನಾಗಿ ಪರಿಗಣಿಸಿ, 15 ಸಾವಿರ ರೂಪಾಯಿ ಗೌರವಧನ ನೀಡಬೇಕು ಅಂತಾ ಆಗ್ರಹಿಸಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ರು. ಸರಕಾರ ನಮಗೆ ಮಾತು ಕೊಟ್ಟಂತೆ ನಡೆದಿಕೊಂಡಿಲ್ಲ. ಸರಕಾರದ ಯಾವುದೇ ಕೆಲಸ ಬಂದ್ರೂ ನಾವು ಮುಖವಾಣಿಯಾಗಿ ಕೆಲಸ ಮಾಡ್ತೀವಿ. ಆದ್ರೆ ಸರಕಾರ ಚುನಾವಣೆ ವೇಳೆ ಮಾತು ಕೊಟ್ಟಂತೆ ನಡೆದುಕೊಂಡಿಲ್ಲ. ನಮ್ಮ ಗೌರವಧನ 15 ಸಾವಿರ ರೂಪಾಯಿಗೆ ಏರಿಕೆ ಮಾಡುವ ಭರವಸೆ ನೀಡಿದ್ದ ಸರಕಾರ ಇನ್ನೂ ಮಾಡಿಲ್ಲ. ಸಧ್ಯ ನಾವು ಪಡೆಯುತ್ತಿರುವ 7 ಸಾವಿರ ಸಂಬಳ ಮನೆ ನಡೆಸಲು ಸಾಕಾಗುತ್ತಿಲ್ಲ. ಹಾಗಾಗಿ ಇದೇ ಜನವರಿ 7 ನಧ ತಾರೀಕಿನಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಸರಕಾರ ನಮ್ಮ ಬೇಡಿಕೆ ಈಡೇರಿಸುವ ವರೆಗೆ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಅಂತಾ ಆಶಾ ಕಾರ್ಯಕರ್ತೆಯರು ತಮ್ಮ ಆಕ್ರೋಶ ಹೊರಹಾಕಿದ್ರು.
Kshetra Samachara
03/01/2025 08:04 pm