ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಬಸ್ ಗಳ ಟಿಕೆಟ್ ರೇಟ್ ಶೇ.15ರಷ್ಟು ಏರಿಕೆ ಮಾಡಿದ್ದು ಜನರ ಆಕ್ರೋಶಕ್ಕೆ ಕಾಂಗ್ರೆಸ್ ಸರ್ಕಾರ ಗುರಿಯಾಗಿದೆ.
ಬೆಲೆ ಏರಿಕೆ ಖಂಡಿಸಿ ಇಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ವಿಭಿನ್ನ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಪುರುಷ ಪ್ರಯಾಣಿಕರಿಗೆ ಗುಲಾಬಿ ನೀಡಿ ಕ್ಷಮೆ ಕೋರಿದ್ದಾರೆ.
ಈ ವೇಳೆ ಪೊಲೀಸ್ ಸಿಬ್ಬಂದಿ, ಆರ್. ಅಶೋಕ್ ಅವರನ್ನು ಪ್ರತಿಭಟನೆ ಮಾಡದಂತೆ ತಡೆದಿದ್ದು, ಆರ್. ಅಶೋಕ್ ಖಾಕಿ ಮೇಲೆ ಸಿಡಿದೆದ್ದರು. ಅಷ್ಟೇ ಅಲ್ಲ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮುಖವಾಡ ಧರಿಸಿದ ಬಿಜೆಪಿ ಕಾರ್ಯಕರ್ತರು ಪ್ರಯಾಣಿಕರ ಕಾಲಿಗೆ ಬಿದ್ದು ಕ್ಷಮೆ ಕೋರಿ ಪ್ರತಿಭಟನೆ ನಡೆಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಆರ್. ಅಶೋಕ್, ಇಂದು ಸಿದ್ದರಾಮಯ್ಯ ಮೌನಿಯಾಗಿದ್ದಾರೆ. ಅವರ ಪರವಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದರು.
ಒಟ್ಟಾರೆ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ಜನರಿಗೆ ಶಾಕ್ ನೀಡಿದ್ರೆ, ಮತ್ತೊಂದು ಕಡೆ ಬಿಜೆಪಿ ಮುಖಂಡರು ಪ್ರಯಾಣಿಕರಿಗೆ ಗುಲಾಬಿ ನೀಡಿ ಕ್ಷಮೆ ಕೇಳಿ ವ್ಯಂಗ್ಯವಾಗಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು.
PublicNext
03/01/2025 08:06 pm