ಸಾಗರ : ತಾಲೂಕಿನ ಆನಂದಪುರ ಸಮೀಪದ ಗೌತಮಪುರ ದೊಣಂದೂರು ಮಧ್ಯಭಾಗದ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬ್ರಿಡ್ಜ್ ಸಮೀಪ ವ್ಯಕ್ತಿಯ ಶವ ಪತ್ತೆಯಾಗಿದ್ದು ಸ್ಥಳೀಯರು ಆನಂದಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆನಂದಪುರ 112 ಸಿಬ್ಬಂದಿಗಳಾದ ಕುಬೇರ, ಹಾಗೂ ಕಾಂತೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪರಿಶೀಲಿಸುತ್ತಿದ್ದಾರೆ.
ಸ್ಥಳೀಯರ ಪ್ರಕಾರ ಈ ವ್ಯಕ್ತಿ ಕಳೆದ ನಾಲ್ಕು ದಿನಗಳಿಂದ ಆನಂದಪುರ ಸುತ್ತಮುತ್ತ ಓಡಾಡುತ್ತಿದ್ದು ಈತನಿಗೆ ಕನ್ನಡ ಬರುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಶವವನ್ನು ಸಾಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
Kshetra Samachara
03/01/2025 08:31 pm