ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗೊಳ್ಳಿ : ಗ್ರಾಮ ಪಂಚಾಯತ್ ಚನಾವಣೆಯಲ್ಲಿ ಸೋಲಿನ ಹತಾಶೆಯಿಂದ ಬಿಜೆಪಿಯಿಂದ ಅಪಪ್ರಚಾರ-ಎಸ್ ಡಿ ಪಿ ಐ

ಗಂಗೊಳ್ಳಿ: ಕೈಲಾಗದವರ ಕೊನೆಯ ಅಸ್ತ್ರ ಅಪಪ್ರಚಾರ ಎಂಬ ಮಾತಿನಂತೆ ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸೋಲನ್ನು ಕಂಡು ಅಧಿಕಾರವನ್ನು ಕಳೆದುಕೊಂಡಿರುವ ಬಿ ಜೆ ಪಿ ಹತಾಶೆಯಿಂದ ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ನಮಾಜ್ ಮಾಡಲಾಗಿದೆ ಎಂಬ ಅಪಪ್ರಚಾರದಲ್ಲಿ ತೊಡಗಿದೆ.ಸಾಮಾನ್ಯವಾಗಿ ಚುನಾವಣೆಗಳಲ್ಲಿ ಗೆದ್ದಂತಹ ಜನಪ್ರತಿನಿಧಿಗಳು ತಮ್ಮ ಕಚೇರಿಗಳನ್ನು ಉದ್ಘಾಟನೆ ಮಾಡುವ ಸಂದರ್ಭದಲ್ಲಿ ತಮ್ಮ ತಮ್ಮ ಧಾರ್ಮಿಕ ನಂಬಿಕೆಗಳಿಗೆ ಅನುಗುಣವಾಗಿ ಪೂಜೆ ಪುರಸ್ಕಾರಗಳನ್ನು ನಡೆಸುತ್ತಾರೆ.

ಈ ಬಾರಿ ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಜಯಂತಿ ಖಾರ್ವಿ ಗಣಹೋಮ ಮಾಡುವ ಮೂಲಕ ತಮ್ಮ ಕಚೇರಿ ಉದ್ಘಾಟಿಸಿದರೆ, ಉಪಾಧ್ಯಕ್ಷರಾಗಿ ಆಯ್ಕೆಯಾದ ತಬ್ರೇಜ್ ರವರು ದುವಾ ನೆರವೇರಿಸುವ ಮೂಲಕ ಉದ್ಘಾಟಿಸಿದ್ದರು. ಇದನ್ನೇ ಮಹಾ ಅಪರಾಧವೆಂಬಂತೆ ಬಿಂಬಿಸುವ ಮೂಲಕ ಬಿ ಜೆ ಪಿ ಗಂಗೊಳ್ಳಿಯ ಸೌಹಾರ್ದತೆಯನ್ನು ಕೆಡಿಸಲು ಪ್ರಯತಿಸುತ್ತಿದೆ. ಬೈಂದೂರು ಶಾಸಕ ಗುರುರಾಜ್ ಘಂಟಿಹೊಳೆ ಈ ಅಪಪ್ರಚಾರಕ್ಕೆ ನೇತೃತ್ವ ನೀಡಿದ್ದು ದುರಂತವೇ ಸರಿ.

ಕಳೆದ 20 ವರ್ಷಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರ ನಡೆಸಿದ್ದ ಬಿ ಜೆ ಪಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕೇವಲ ಕೋಮು ಹಾಗೂ ದ್ವೇಷ ರಾಜಕಾರಣ ಮಾಡಿದ ಪರಿಣಾಮ ಈ ಬಾರಿ ಗಂಗೊಳ್ಳಿ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ಸೋಲಿಸಿ ಮನೆಗೆ ಕಳುಹಿಸಿದ್ದರು. ಆದರೂ ತನ್ನ ತಪ್ಪುಗಳಿಂದ ಪಾಠ ಕಲಿಯದ ಬಿಜೆಪಿ ತನ್ನ ಹಳೆಯ ಚಾಳಿಯನ್ನು ಮುಂದುವರೆಸಿ ಈ ಅಪಪ್ರಚಾರದಲ್ಲಿ ತೊಡಗಿದೆ.ಇದು ಹೀಗೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನತೆ ಬೈಂದೂರು ಕ್ಷೇತ್ರದಿಂದಲೇ ಬಿಜೆಪಿಯನ್ನು ಮೂಲೆಗುಂಪು ಮಾಡಲಿದ್ದಾರೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ನ ನೂತನ ಉಪಾಧ್ಯಕ್ಷ ತಬ್ರೇಜ್ ಗಂಗೊಳ್ಳಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

03/01/2025 08:47 pm

Cinque Terre

2.83 K

Cinque Terre

1