ಮುಲ್ಕಿ:ಕನ್ನಡ ಮಾಧ್ಯಮಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಸಹಕರಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜೀ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು
ಅವರು ಹಳೆಯಂಗಡಿ ಸಮೀಪದ ತೋಕೂರು ಅನುದಾನಿತ ಶ್ರೀ ಸುಬ್ರಮಣ್ಯ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳ ಪ್ರತಿಭಾ ಅನಾವರಣ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಮುಖ್ಯ ಅತಿಥಿಗಳಾಗಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಸುಮಾ ಚಂದ್ರಶೇಖರ್, ಮಂಗಳೂರು ದಿಶಾ ಕೌನ್ಸಲಿಂಗ್ ಸೆಂಟರ್ ನ ವೃತ್ತಿ ಸಲಹೆಗಾರರಾದ ರಾಜೇಶ್ವರಿ ಡಿ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿಕಾರ್ವಿ, ಎನ್.ಎಂ. ಪಿ. ಎ ನ ಅಸಿಸ್ಟೆಂಟ್ ಸುಪರಿಂಟೆಂಡೆಂಟ್ ಸುಧೀರ್,ನಿವೃತ್ತ ಅಧಿಕಾರಿ ಶ್ರೀಧರ ಪಕ್ಷಿಕೆರೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ ಎಸ್ ಪೂಜಾರಿ, ಮೆಸ್ಕಾಂ ಇಲಾಖೆಯ ಜಗದೀಶ್ ಪೂಜಾರಿ ತೋಕೂರು,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಾಜು ಬಂಗೇರ,ಮುಖ್ಯೋಪಾಧ್ಯಾಯಿನಿ ಗೌರಿ,ಅಂಗನವಾಡಿ ಶಿಕ್ಷಕಿ ಪ್ರೇಮಲತಾ ಮತ್ತಿತರರು ಉಪಸ್ಥಿತರಿದ್ದರು. ಸಹಶಿಕ್ಷಕಿ ಮೋಹಿನಿ ಧನ್ಯವಾದ ಅರ್ಪಿಸಿದರು,ಸರಿತಾ ನಿರೂಪಿಸಿದರು.
ವೇದಿಕೆಯಲ್ಲಿ ಯಕ್ಷ ಗುರು ಶರಶ್ಚಂದ್ರ ರವರಿಗೆ ಗುರುವಂದನೆ ಹಾಗೂ ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ದಾನಿಗಳಿಗೆ ಗೌರವ ಕಾರ್ಯಕ್ರಮ ನಡೆಯಿತು
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
Kshetra Samachara
03/01/2025 09:30 pm