ಹಾವೇರಿ : ಲಿಂಗತ್ವ ಅಲ್ಪಸಂಖ್ಯಾತರು ನಿರ್ವಹಣೆ ಮಾಡುವ ಅಕ್ಕಕೆಫೆ ಶನಿವಾರ ಉದ್ಘಾಟನೆಯಾಗಲಿದೆ. ರಾಜ್ಯ ಸರ್ಕಾರ ರಾಜ್ಯದ ವಿವಿಧಡೆ 50 ಅಕ್ಕ ಕೆಫೆ ನಿರ್ಮಿಸಿದ್ದು ಹಾವೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರೇ ಕೆಫೆ ನಿರ್ವಹಣೆ ಮಾಡಲಿದ್ದಾರೆ.
ರಾಜ್ಯದಲ್ಲಿ ಪ್ರಥಮ ಭಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ನೇತ್ರತ್ವದಲ್ಲಿ ನಡೆಯುವ ಅಕ್ಕಕೆಫೆ ನಾಳೆಯಿಂದ ಪ್ರಾರಂಭವಾಗಲಿದೆ. ಹಾವೇರಿಯ ಜಿಲ್ಲಾಪಂಚಾಯತಿ ಆವರಣದಲ್ಲಿ ಸುಮಾರು 15 ಲಕ್ಷ ರುಪಾಯಿ ಅನುದಾನದಲ್ಲಿ ಅಕ್ಕ ಕೆಫೆಯನ್ನ ನಿರ್ಮಾಣ ಮಾಡಲಾಗಿದೆ.
ಈ ಕೆಫೆಯಲ್ಲಿ ಅಡುಗೆ ಮಾಡುವುದು, ಸರ್ವ್ ಮಾಡೋದು ಸೇರಿದಂತೆ ಎಲ್ಲವೂ ಲಿಂಗತ್ವ ಅಲ್ಪಸಂಖ್ಯಾತರೇ. ಈ ವಿಶಿಷ್ಟ ಕೆಫೆಯನ್ನ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಶನಿವಾರ ಉದ್ಘಾಟಿಸಲಿದ್ದಾರೆ.
PublicNext
04/01/2025 10:57 am