ಮಂಗಳೂರು: ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಢೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ‘ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ.
ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Kshetra Samachara
04/01/2025 11:12 am