ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜ 8 ರಿಂದ 13 ವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ...

ಮಂಗಳೂರು: ಬಂಟ್ವಾಳ ತಾಲೂಕಿನ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜನವರಿ 8 ರಿಂದ13 ತನಕ ಬ್ರಹ್ಮಕಲಶೋತ್ಸವ ನಡೆಯಲಿದೆ.

ಶ್ರೀ ಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವಸ್ಥಾನದ ಟ್ರಸ್ಟಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ಚಂದ್ರ ಎಸ್ ಅರ್ ಅವರು ವಿವಿಧ ವೈದಿಕ ಅನುಷ್ಠಾನ,

ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀ ಮಹಾರಾಜ್ ಅವರ ದಿವ್ಯ ಉಪಸ್ಥಿತಿಯಲ್ಲಿ ಕ್ಷೇತ್ರದ ಅಧಿದೇವತೆ ಶ್ರೀ ದುರ್ಗಾಪರಮೇಶ್ವರಿ ಹಾಗೂ ಸಪರಿವಾರ ದೇವರುಗಳಿಗೆ ಬ್ರಹ್ಮಕಲಶೋತ್ಸವ, ಶತಚಂಡಿಕಾಯಾಗ,ಪ್ರತಿಷ್ಠಾ ಪೌರ್ಣಮಿ ಉತ್ಸವಗಳು ವಿಜೃಂಭಣೆಯಿಂದ ನಡೆಯಲಿದೆ ಎಂದರು.

ಜನವರಿ 12 ರಂದು ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ದುರ್ಗಾಪರಮೇಶ್ವರಿ ಮತ್ತು ಸಪರಿವಾರ ದೇವರುಗಳಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಗಂಗಾಧರ್ ಶೇಂದ್ರೆಕಾರ್, ಗಣೇಶ್ ಕಾಮತ್,ದಿವಾಕರ್ ನಾಯಕ್ ಉಪಸ್ಥಿತರಿದ್ದರು.

Edited By : Suman K
Kshetra Samachara

Kshetra Samachara

04/01/2025 11:46 am

Cinque Terre

5.06 K

Cinque Terre

0