ದೊಡ್ಡಬಳ್ಳಾಪುರ: ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆಗೆ ಕಾರಣರಾಗಿರುವ ಸಚಿವ ಪ್ರಿಯಾಂಕ ಖರ್ಗೆ ಉದ್ಧಟತನ ಬಿಟ್ಟು ರಾಜೀನಾಮೆ ಕೊಡಬೇಕು. ರಾಜೀನಾಮೆ ನೀಡುವರೆಗೂ ನಿರಂತರ ಹೋರಾಟ ಮಾಡ್ತೀವಿ ಎಂದು ರಾಜ್ಯ ಬಿಜೆಪಿ ವಕ್ತಾರ ದೊಡ್ಡೇರಿ ವೆಂಕಟೇಶ್ ಎಚ್ಚರಿಸಿದ್ದಾರೆ.
ದೊಡ್ಡಬಳ್ಳಾಪುರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಎಲ್ಲಾ ಭಾಗ್ಯಗಳ ಜೊತೆಗೆ ಆತ್ಮಹತ್ಯೆ ಭಾಗ್ಯವನ್ನು ನೀಡುತ್ತಿದೆ. ದುಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲಿಯವರೆಗೂ 6 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಸಚಿವ ಪ್ರಿಯಾಂಕ ಖರ್ಗೆ ಅಪ್ತನ ನಿರಂತರ ಬೆದರಿಕೆಯಿಂದ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಆರೋಪಿಸಿದರು
ಈಶ್ವರಪ್ಪನ ಪ್ರಕರಣದಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದಕ್ಕೆ ಈಶ್ಪರಪ್ಪ ರಾಜೀನಾಮೆ ನೀಡಿದ್ರು. ಕಾಂಗ್ರೆಸ್ ಸರ್ಕಾರದಲ್ಲಿನ ಸಚಿವ ನಾಗೇಂದ್ರರವರ ಮೇಲೆ ಭ್ರಷ್ಟಚಾರದ ಆರೋಪ ಬಂದ ಹಿನ್ನಲೆ ರಾಜೀನಾಮೆ ನೀಡಿದ್ರು. ಆದರೆ, ಪ್ರಿಯಾಂಕ್ ಖರ್ಗೆ ಅವರ ಮೇಲೆ ಆರೋಪ ಇದ್ದರು ತಂದೆ ಎಐಸಿಸಿ ಅಧ್ಯರಾಗಿರುವ ಹಿನ್ನಲೆ ರಾಜೀನಾಮೆ ಕೊಡದೇ ಹುಂಬುತನದ ಮಾತನಾಡುತ್ತಿದ್ದಾರೆ. ಅವರು ರಾಜೀನಾಮೆ ನೀಡುವವರೆಗೂ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಮೃತ ಸಚಿನ್ ಪಂಚಾಳ ಕುಟುಂಬಕ್ಕೆ 1 ಕೋಟಿ ಪರಿಹಾರವನ್ನ ಸರ್ಕಾರ ನೀಡಬೇಕು. ಹಾಗೆಯೇ ಆತನ ಸಹೋದರಿಗೆ ಸರ್ಕಾರಿ ಹುದ್ದೆ ನೀಡಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ರಾಮಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್ ಇದ್ದರು.
PublicNext
04/01/2025 11:59 am