ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳ್ಳತನವಾದ ವಸ್ತುಗಳನ್ನು ಮಾಲೀಕರಿಗೆ ನೀಡುವ ಕಾರ್ಯಕ್ರಮಕ್ಕೆ ಸಚಿವ ಡಿ.ಸುಧಾಕರ್ ಚಾಲನೆ

ಚಿತ್ರದುರ್ಗ: ಚಿತ್ರದುರ್ಗ ನಗರದ ಡಿ.ಎ.ಆರ್ ಕವಾಯಿತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾಲೀಕದಾರರಿಗೆ ಸ್ವತ್ತು ಗಳನ್ನು ಹಿಂತಿರುಗಿಸುವ ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ.

ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಳ್ಳತನ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮ ಬಗ್ಗೆ ಜಾಗೃತಿ, ಸೈಬರ್ ಅಪರಾಧ, ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಬಗ್ಗೆ, ಸಂಚಾರಿ ರಸ್ತೆ ಸುರಕ್ಷಿತ ನಿಯಮಗಳ ಪಾಲನೆ ಬಗ್ಗೆ ಜಾಗೃತಿ, ಅಗ್ನಿಶಾಮಕ ಇಲಾಖೆಯಿಂದ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಅಣುಕು ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವ ಡಿ. ಸುಧಾಕರ್ ಮಾತನಾಡಿ ಪೋಲಿಸ್ ಇಲಾಖೆ ಕಾರ್ಯಗಳಿಂದ ಸಾಕಷ್ಟು ಜನರು ನೆಮ್ಮದಿ ಎಂದುದ್ದಾರೆ ಸಾಕಷ್ಟು ಪ್ರಕರಣಗಳನ್ನು ಜಿಲ್ಲೆಯಲ್ಲಿ ಭೇದಿಸಿ ಆರೋಪಿಗಳನ್ನು ಜೈಲಿಗೆ ಕಳಿಸಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಅಪರಾಧಗಳು ಕಡಿಮೆ ಆಗಬೇಕೆನ್ನುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳು ಸೇರಿದಂತೆ ಅರಿವು ಕೂಡ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

04/01/2025 12:04 pm

Cinque Terre

2.06 K

Cinque Terre

0

ಸಂಬಂಧಿತ ಸುದ್ದಿ