ಹುಬ್ಬಳ್ಳಿ:ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ವಾಣಿವಿಲಾಸ್ ಸರ್ಕಲ್ ನಲ್ಲಿ ಈಗಷ್ಟೇ ನಡೆದಿದೆ.
ಕಾರವಾರ ರಸ್ತೆಯಿಂದ ಗೋಕುಲ್ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಎದುರುಗಡೆಯಿಂದ ಗೂಡ್ಸ್ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ,ಬೈಕ್ ಸವಾರನ ತಲೆಗೆ ಗಂಭೀರ ಏಟಾಗಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಗೋಕಾಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟ ಬೈಕ್ ಸವಾರ ಮಂಜುನಾಥ್ ನಗರ ನಿವಾಸಿ ಅಂತಾ ತಿಳಿದು ಬಂದಿದೆ.ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿನಯ ರೆಡ್ಡಿ, ಕ್ರೈಂ ಬ್ಯುರೋ, ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/01/2025 12:19 pm