ಹುಬ್ಬಳ್ಳಿ: ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಶಾಕ್ ಕೊಟ್ಟಿದೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಏಕಾಏಕಿಯಾಗಿ 15% ಬಸ್ ಟಿಕೆಟ್ ದರವನ್ನು ಹೆಚ್ಚಿಸಿದ್ದಕ್ಕೆ ಹುಬ್ಬಳ್ಳಿಯಲ್ಲಿ ಪ್ರಯಾಣಿಕರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಫ್ರೀ ಬಸ್ ಮಾಡಿದ್ದರು. ಇದು ಸಾಕಷ್ಟು ರೀತಿಯಲ್ಲಿ ಚರ್ಚೆಯಾಗಿತ್ತು. ಈಗ ಮತ್ತೆ ಸರ್ಕಾರ ಬಸ್ ಟಿಕೆಟ್ ದರವನ್ನು 15% ಹೆಚ್ಚಿಗೆ ಮಾಡಿದ್ದರಿಂದ ಹುಬ್ಬಳ್ಳಿಯಲ್ಲಿ ಪುರುಷ ಬಸ್ ಪ್ರಯಾಣಿಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಶಕ್ತಿ ಯೋಜನೆ ಮಾಡಿದಾಗಿಂದ ಬಸ್‌ಗಳ ಸಂಖ್ಯೆ ಕಡಿಮೆಯಾಗಿವೆ. ಸರಿಯಾದ ಸಮಯಕ್ಕೆ ಬಸ್‌ಗಳಿಲ್ಲ ಜನರು ಗೋಳಾಡುತ್ತಿದ್ದಾರೆ. ಅಂತಾದ್ರಲ್ಲಿ ಈಗ ಏಕಾಏಕಿಯಾಗಿ ಬಸ್ ದರ ಏರಿಸಿ ಬಡ ಜನರ ಹೊಟ್ಟೆಯ ಮೇಲೆ ಬರೆ ಎಳೆದಂತಾಗಿದೆ. ಒಂದು ಕಡೆ ಫ್ರೀ ಕೊಟ್ಟು ಇನ್ನೊಂದು ಕಡೆ ಜೇಬಿಗೆ ಕತ್ತರಿ ಹಾಕುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದು ಜನ ನಾಯಕರೇ ನೀವೇ ಹೇಳಬೇಕೆಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.
-ಕ್ಯಾಮೆರಾ ಪರ್ಸನ್ ಗಜಾನನ ಜೊತೆ ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
Kshetra Samachara
04/01/2025 01:28 pm