ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೊಡ್ಡಕವಲಂದೆ ಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

*ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೊಡ್ಡಕವಲಂದೆ ಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ*

ನಂಜನಗೂಡು: ರಾಜ್ಯ ಸಭೆ ಸದನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೊಡ್ಡಕವಲಂದೆ ಗ್ರಾಮದಲ್ಲಿ ದೊಡ್ಡ ಕವಲಂದೆ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಬಳಗದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ದೊಡ್ಡ ಕವಲಂದೆ ಗ್ರಾಮದ ಕೆ.ಆರ್.ಪುರ ವೃತ್ತದ ಚಾಮರಾಜನಗರ -ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಂಬೇಡ್ಕರ್ ಅಭಿಮಾನಿಗಳ ಬಳಗದ ನೂರಾರು ಕಾರ್ಯಕರ್ತರು ಕವಲಂದೆ ಗ್ರಾಮದ ಹಳೇ ಪೊಲೀಸ್ ಠಾಣೆಯ ತನಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಾನವ ಸರಪಳಿ ನಿರ್ಮಿಸಿ ದಿಕ್ಕಾರದ ಘೋಷಣೆಗಳನ್ನು ಕೂಗಿ, ರಾಷ್ಟ್ರೀಯ ಹೆದ್ದಾರಿ ತಡೆದು ಅಮಿತ್ ಶಾ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ ಉಪ ತಹಶೀಲ್ದಾರ್ ಕಿರಣ್ ಕುಮಾರ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಕೆಲವು ಗಂಟೆಗಳ ಕಾಲ ಕಿಲೋ ಮೀಟರ್ ದೂರದ ತನಕ ಟ್ರಾಫಿಕ್ ಜಾಮ್ ಕಂಡು ಬಂದಿದೆ.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಉಪ್ಪನಹಳ್ಳಿ ಶಿವಣ್ಣ, ಮಾಜಿ ಮೇಯರ್ ಪುರುಷೋತ್ತಮ್, ಗ್ರಾ.ಪಂ ಉಪಾಧ್ಯಕ್ಷ ಪ್ರಶಾಂತ್ ಕುಮಾರ್, ಗ್ರಾಪಂ ಸದಸ್ಯರಾದ ನವೀನ್, ಸಿದ್ದಲಿಂಗಪ್ಪ, ನಸರುಲ್ಲಾಖಾನ್, ಮಂಜುನಾಥ್, ಕುಂಬ್ರಹಳ್ಳಿ ಪುರುಷೋತ್ತಮ್, ನೇರಳೆ ಸೋಮಣ್ಣ, ಗ್ರಾಪಂ ಅಧ್ಯಕ್ಷ ಗಿರೀಶ್, ಮಾಜಿ ತಾಪಂ ಸದಸ್ಯರಾದ ಮಹೇಂದ್ರ, ಅಲ್ತಾಫ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಾಜೀಮ್ ಉಲ್ಲಾ ಖಾನ್, ಮುಖಂಡರಾದ ಪಿ.ಶಿವಕುಮಾರ್, ಟಿ.ಎನ್. ಕೃಷ್ಣ, ಎಂ.ನಾಗೇಶ್, ದಸಂಸ ಸಂಚಾಲಕ ಮಹೇಶ್, ರೈತ ಸಂಘದ ಕಾರ್ಯದರ್ಶಿ ಮಲ್ಲೇಶ್, ಎಂ. ಮಹದೇವಯ್ಯ, ಬಸವೇಗೌಡ, ರಾಜೇಶ್, ಕೆ.ನಾಗೇಶ್, ಸ್ವಾಮಿ, ಪಿ.ಸಿದ್ದು, ಬಾಬು ಸೇರಿದಂತೆ ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

04/01/2025 01:29 pm

Cinque Terre

800

Cinque Terre

0