ಹುಬ್ಬಳ್ಳಿ : ಅಯ್ಯಪ್ಪ ಸ್ವಾಮಿ ಭಕ್ತರ ಜೀವಕ್ಕೆ ಮಾರಕವಾಗಿದ್ದ ಕಟ್ಟಡದ ತೆರವಿಗೆ ಈಗಾಗಲೇ ಚಿಂತನೆ ನಡೆದಿದೆ. ಇದರ ಬೆನ್ನಲ್ಲೇ ಈಗ ಪಾಲಿಕೆಯ ಆಯುಕ್ತರು ಹಾಗೂ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಸಿಲಿಂಡರ್ ಸೋರಿಕೆಯಿಂದಾಗಿ ನಡೆದ ಅವಘಡದಲ್ಲಿ 8 ಜನ ಅಯ್ಯಪ್ಪ ಮಾಲಾಧಾರಿಗಳ ಸಾವಿಗೆ ಕಾರಣವಾಗಿರುವ ಇಲ್ಲಿನ ಸಾಯಿನಗರದ ಅಚ್ಚವ್ವನ ಕಾಲನಿಯಲ್ಲಿರುವ ಈಶ್ವರ ದೇವಸ್ಥಾನದ ಬಳಿಯ ಕಟ್ಟಡವನ್ನು ಪಾಲಿಕೆ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕಾಲನಿಯ ರಸ್ತೆಯಲ್ಲಿಯೇ ಈಶ್ವರ ದೇವಸ್ಥಾನ ಹಾಗೂ ಅಂಗನವಾಡಿ ಕಟ್ಟಡ ನಿರ್ಮಿಸಲಾಗಿದೆ. ಈಚೆಗೆ ನಡೆದ ದುರಂತದ ಹಿನ್ನೆಲೆಯಲ್ಲಿ ಕಟ್ಟಡದ ತೆರವು ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಪ್ರಾಥಮಿಕ ಹಂತದಲ್ಲಿ ಚರ್ಚೆ ನಡೆಸಲಾಗಿದೆ. ಮತ್ತೊಮ್ಮೆ ಚರ್ಚೆ ನಡೆಸಿ ಕಟ್ಟಡದ ತೆರವಿಗೆ ಬೇಕಾದ ಕ್ರಮಕೈಗೊಳ್ಳುವುದಾಗಿ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ.
ಸಾಯಿನಗರ ಹಾಗೂ ಜನರಿಗೆ ಸುತ್ತಮುತ್ತಲಿನ ಬಡಾವಣೆಗಳ ಅನಕೂಲವಾಗಲು ಈ ಭಾಗದಲ್ಲಿ ನೂತನ ಸಮುದಾಯ ಭವನ ನಿರ್ಮಿಸುವಂತೆ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಸೇರಿದಂತೆ ಸ್ಥಳೀಯರು ಪಾಲಿಕೆಗೆ ಮನವಿ ಸಲ್ಲಿಸಿದ್ದಾರೆ. ಸಮುದಾಯ ಭವನ ನಿರ್ಮಿಸಲು ಬೇಕಾದ ಸ್ಥಳ ಪರಿಶೀಲಿಸಲಾಗಿದೆ. ಇದೇ ಕಾಲನಿಯಲ್ಲಿ ಪಾಲಿಕೆಗೆ ಸಂಬಂಧಿಸಿದ 3 ಗುಂಟೆ ಜಾಗವಿದ್ದು, ಅಲ್ಲಿಯೇ ಈ 30 ಲಕ್ಷವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು.
ಇದಕ್ಕೆ ಬೇಕಾದ ಅನುದಾನ ಸಹ ಮಂಜೂರು ಸಹ ಮಾಡಿದ್ದು ಟೆಂಡರ್ ಕಾರ್ಯ ಪೂರ್ಣಗೊಳಿಸಿ, ಜನವರಿ ಅಂತ್ಯದೊಳಗೆ ಭವನ ನಿರ್ಮಾಣ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು ಆಯುಕ್ತರು ತಿಳಿಸಿದರು.
Kshetra Samachara
04/01/2025 01:41 pm