ಚಿಕ್ಕೋಡಿ: ಆಕಸ್ಮಿಕವಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ನಿಪ್ಪಾಣಿ ತಾಲೂಕಿನ ಮಾಣಕಾಪುರ ಗ್ರಾಮದ ಬಳಿ ನಡೆದಿದೆ.
ಬೆಳಗಾವಿಯಿಂದ ಮಹಾರಾಷ್ಟ್ರದ ಇಚಲಕರಂಜಿ ಪಟ್ಟಣಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಮಾನಾಕಾಪುರ ಗ್ರಾಮದ ಬಳಿ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಇಡೀ ಕಾರು ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
PublicNext
04/01/2025 01:48 pm