ಬೆಂಗಳೂರು: ಬೆಂಗಳೂರಿನಲ್ಲಿ ಬ್ಯಾಟರಿ ಕಳ್ಳರ ಹಾವಳಿ ಹೆಚ್ಚಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಬ್ಯಾಟರಿಗಳ ಕಳವು ಮಾಡಿದ್ದಾರೆ.
ರಾಜಾಜಿನಗರದ ಠಾಣಾ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ಘಟನೆ ನಡೆದಿದೆ. ಡಿಯೋ ಗಾಡಿಯಲ್ಲಿ ಬಂದ ಇಬ್ಬರಿಂದ ಕೃತ್ಯ ನಡೆದಿದೆ. ಆರೋಪಿಗಳ ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
04/01/2025 01:59 pm