ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ : ಆಟೋ ಚಾಲಕನನ್ನ ಬಂಧಿಸಿದ ಖಾಕಿ

ಬೆಂಗಳೂರು : ಮದ್ಯ ಸೇವಿಸಿ ಬೇರೆ ಮಾರ್ಗದಲ್ಲಿ ಹೋಗುವುದಲ್ಲದೆ ದುರ್ನಡತೆಗೆ ತೋರಿದ್ದ ಆಟೋ ಚಾಲಕನನ್ನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ ಸುನಿಲ್ ಎಂದು ಗುರುತಿಸಲಾಗಿದೆ. ಆರೋಪಿ ಚಾಲಕನ ವರ್ತನೆಯಿಂದ ಆತಂಕಗೊಂಡ ಮಹಿಳಾ ಪ್ರಯಾಣಿಕರೊಬ್ಬರು ಚಲಿಸುತ್ತಿದ್ದ ಆಟೋದಿಂದ ಜಿಗಿದು ತಪ್ಪಿಸಿಕೊಂಡಿರುವ ಘಟನೆ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಿತ್ತು.

ಥಣಿಸಂದ್ರದ ನಿವಾಸಿಯಾಗಿದ್ದ ಮಹಿಳೆ, ಗುರುವಾರ ರಾತ್ರಿ ಕೆಲಸ ನಿಮಿತ್ತ ಹೊರ ಹೋಗಿದ್ದರು. ವಾಪಾಸ್ ಮನೆಗೆ ತೆರಳಲು ಹೊರಮಾವಿನಿಂದ ಥಣಿಸಂದ್ರಕ್ಕೆ ನಮ್ಮ ಯಾತ್ರಿ ಆ್ಯಪ್‌ನಲ್ಲಿ ಆಟೋ ಬುಕ್ ಮಾಡಿದ್ದರು. 8.55ರ ಸುಮಾರಿಗೆ ಪಿಕಪ್ ಲೋಕೆಷನ್ ಬಳಿ ಬಂದಿದ್ದ ಆಟೋ ಚಾಲಕ ಮಹಿಳೆಯನ್ನ ಥಣಿಸಂದ್ರಕ್ಕೆ ಡ್ರಾಪ್ ಮಾಡದೆ ಹೆಬ್ಬಾಳ ಕಡೆ ಹೋಗಲಾರಂಭಿಸಿದ್ದ. ತಪ್ಪಾದ ದಾರಿ ಹೋಗುತ್ತಿರುವುದನ್ನ ಕಂಡ ಮಹಿಳೆ ಚಾಲಕನಿಗೆ ಹೇಳಿದರೂ ಸಹ ಆತ ಪ್ರತಿಕ್ರಿಯಿಸಿರಲಿರಲಿಲ್ಲ.

ಆಟೋ ನಿಲ್ಲಿಸುವಂತೆ ಸೂಚಿಸಿದರೂ ಚಾಲನೆ ಮುಂದುವರಿಸಿದ್ದ. ಇದರಿಂದ ಆತಂಕಗೊಂಡ ಮಹಿಳೆ ಚಲಿಸುತ್ತಿರುವಾಗಲೇ ಆಟೊದಿಂದ ಜಿಗಿದಿದ್ದರು. ಘಟನೆಯ ಕುರಿತು ಮಹಿಳೆಯ ಪತಿ ಅಜರ್ ಖಾನ್ ಎಕ್ಸ್ ಆ್ಯಪ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರು.

ಬಳಿಕ ಅಜರ್ ನೀಡಿದ ಲಿಖಿತ ದೂರನ್ನ ಆಧರಿಸಿ ತನಿಖೆ ಕೈಗೊಂಡ ಅಮೃತಹಳ್ಳಿ ಠಾಣೆ ಪೊಲೀಸರು, ಆರೋಪಿ ಚಾಲಕನನ್ನ ಪತ್ತೆ ಹಚ್ಚಿ ಬಂಧಿಸಿರುವುದಾಗಿ ತಿಳಿಸಿದ್ದಾರೆ.

Edited By : Shivu K
PublicNext

PublicNext

04/01/2025 02:40 pm

Cinque Terre

20.84 K

Cinque Terre

0