ಧಾರವಾಡ : ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರ ಬೆದರಿಕೆಯೇ ಕಾರಣವಾಗಿದ್ದು, ಸಚಿವ ಖರ್ಗೆ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ರಾಜ್ಯ ಸರ್ಕಾರ ಹೆಚ್ಚಳ ಮಾಡಿರುವ ಬಸ್ ಟಿಕೆಟ್ ದರವನ್ನು ಕೂಡಲೇ ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಚಿವರ ಬೆಂಬಲಿಗರಿಂದಾಗಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜ್ಯದಲ್ಲಿ ದುರಾಡಳಿತ ಮನೆ ಮಾಡಿದ್ದು, ಕೂಡಲೇ ಪ್ರಿಯಾಂಕ ಖರ್ಗೆ ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು ಎಂಬು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
ಅಲ್ಲದೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿ ಪರದಾಡುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಹೀಗಿರುವಾಗ ಬಸ್ ಟಿಕೆಟ್ ದರವನ್ನೂ ಹೆಚ್ಚಳ ಮಾಡಿ ಬಡವರು ಹಾಗೂ ಮಧ್ಯಮ ವರ್ಗದವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಒಂದು ಕೈಯಿಂದ ಕೊಡುವುದು ಮತ್ತೊಂದು ಕೈಯಿಂದ ಕಸಿದುಕೊಳ್ಳುವ ಕೆಲಸವನ್ನು ಈ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/01/2025 02:55 pm