ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಬಾಣಂತಿಯರ ಸಾವು, ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಹಾಗೂ ಶಿಶುಗಳ ಸಾವಿನ ಪ್ರಕರಣಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟಿಸಲಾಯಿತು.‌

ಇಂದು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತೆಯರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ ಬಾಣಂತಿಯರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಸಾವನ್ನಪ್ಪಿದ ಬಾಣಂತಿಯರ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲವಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜೀನಾಮೆ ನೀಡಬೇಕು. ಬಳ್ಳಾರಿ, ಬೆಳಗಾವಿ, ತಿಪಟೂರು, ಬೆಂಗಳೂರು, ಕೊಪ್ಪಳ, ರಾಯಚೂರು, ಕಲ್ಬುರ್ಗಿಯಿಂದ ಬರುತ್ತಿರುವ ವರದಿಗಳ ಪ್ರಕಾರ ಸರ್ಕಾರ ಬಳಸುತ್ತಿರುವ ಕಳಪೆ ಗುಣಮಟ್ಟದ ಔಷಧಿಗಳಿಂದ ಸಾವುಗಳು ಆಗುತ್ತಿದೆ. ಹಾಗಾಗಿ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.‌

Edited By : Nagesh Gaonkar
PublicNext

PublicNext

04/01/2025 03:21 pm

Cinque Terre

20.26 K

Cinque Terre

0

ಸಂಬಂಧಿತ ಸುದ್ದಿ