ಬೆಂಗಳೂರು: ಬಿ.ವೈ.ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಮುಖಂಡ ಎಸ್. ಮನೋಹರ್ ನೇತೃತ್ವದಲ್ಲಿ ಮುತ್ತಿಗೆ ಹಾಕಿದ್ದಾರೆ.
ನಿನ್ನೆ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಮುಖಂಡರು ಮುಂದಾಗಿದ್ರು. ಈ ಹಿನ್ನಲೆ ಇಂದು ಶಿವಾನಂದ ಸರ್ಕಲ್ ಬಳಿ ಇರುವ ವಿಜಯೇಂದ್ರ ನಿವಾಸಕ್ಕೆ ಕಾಂಗ್ರೆಸ್ ಮುಖಂಡರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಕೈ ಮುಖಂಡರನ್ನ ಪೊಲೀಸರು ತಡೆದಿದ್ದಾರೆ.
PublicNext
04/01/2025 03:29 pm