ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿರಾಜಪೇಟೆ : ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ನಾಪೋಕ್ಲು : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿರಾಜಪೇಟೆ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಪೋಕ್ಸೊ ಕಾಯಿದೆ,ಲೈಂಗಿಕ ದೌರ್ಜನ್ಯ,ರಸ್ತೆ ಸುರಕ್ಷತಾ ನಿಯಮ,ಸೈಬರ್ ಕ್ರೈಂ, ಮಾದಕ ವ್ಯಸನಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ವಿರಾಜಪೇಟೆ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಮೋದ್ ರವರು ಮಾತನಾಡಿ ವಾಹನ ಚಲಾಯಿಸುವ ಸಂದರ್ಭ ಸೀಟ್ ಬೆಲ್ಟ್ ಧರಿಸುವುದು,ಹೆಲ್ಮೆಟ್ ಧರಿಸುವುದು,ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

Edited By : PublicNext Desk
Kshetra Samachara

Kshetra Samachara

04/01/2025 03:38 pm

Cinque Terre

480

Cinque Terre

0