ತುಮಕೂರು: ನಗರದಲ್ಲಿರುವ ಸಿದ್ದಗಂಗಾ ಮಠಕ್ಕೆ ಶುಕ್ರವಾರ ನಟ ಡಾಲಿ ಧನಂಜಯ್ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಶಿವಕುಮಾರ ಸ್ವಾಮೀಜಿ ಗದ್ದುಗೆ ಬಳಿ ವೆಡ್ಡಿಂಗ್ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿದರು.
ಗದ್ದುಗೆಗೆ ಸಹಸ್ರನಾಮಾರ್ಚನೆ ಪೂಜೆ ಸಲ್ಲಿಸಿ, ಗದ್ದುಗೆ ಪೂಜೆ ಬಳಿಕ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿಯಾಗಿ ಸಿದ್ದಲಿಂಗ ಸ್ವಾಮೀಜಿಗಳಿಗೆ ವಿವಾಹ ಆಮಂತ್ರಣ ಪತ್ರಿಕೆ ನೀಡಿ, ಮಠಕ್ಕೆ ಪುನೀತ್ ರಾಜ್ ಕುಮಾರ್ ಅವರ ಜೊತೆಗೆ ಬಂದಿದ್ದ ನೆನಪನ್ನು ಶ್ರೀಗಳೊಂದಿಗೆ ಹಂಚಿಕೊಂಡರು.
ಈ ಸಂದರ್ಭ ತಮ್ಮ ಮೆಚ್ಚಿನ ನಟ ಡಾಲಿ ಧನಂಜಯ್ ಜತೆಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್ ತುಮಕೂರು
PublicNext
04/01/2025 03:56 pm