ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ, ನಾಲ್ವರು ಮಕ್ಕಳಿಗೆ ಗಾಯ

ಬಂಗಾರಪೇಟೆ: ಅಂಗನವಾಡಿ ಕಟ್ಟಡದ ಮೇಲ್ಛಾವಣೆಯ ಗಾರೆ ಕುಸಿತಗೊಂಡು ಪುಟ್ಟ ಮಕ್ಕಳು ಗಾಯಗೊಂಡ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆಯ ದಾಸರ ಹೊಸಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಒಟ್ಟು 7 ಮಕ್ಕಳು ಅಂಗನವಾಡಿಯಲ್ಲಿ ಇದ್ದರು. ಘಟನೆ ವೇಳೆ 4 ಮಕ್ಕಳಿಗೆ ತಲೆಗೆ, ಕೈ, ಕಾಲುಗಳಿಗೆ ಗಾಯಗಳಾಗಿತ್ತು. ಕೂಡಲೇ ಮಕ್ಕಳನ್ನು ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸದ್ಯ ಯಾವುದೇ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಅಂಗನವಾಡಿ ಕಟ್ಟಡ ಶಿಥಿಲವಾಗಿರುವ ಕುರಿತು ಈ ಹಿಂದೆ ಹಲವು ಬಾರಿ ಸ್ಥಳೀಯರು ‌ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ಮನವಿಗೆ ಸ್ಪಂದಿಸಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಘಟನಾ ಸ್ಥಳಕ್ಕೆ ಶಾಸಕ ಎಸ್. ಎನ್. ನಾರಾಯಣಸ್ವಾಮಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

Edited By : Ashok M
PublicNext

PublicNext

04/01/2025 04:31 pm

Cinque Terre

23.89 K

Cinque Terre

0