ಉಡುಪಿ: ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ. ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ರೋಸಿ ಹೋಗಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಡರ್ ಪಾಸ್ ಕಾಮಗಾರಿ ನಡೆಯುವ ಸ್ಥಳದಲ್ಲಿ ಭಾರಿ ಪ್ರಮಾಣದ ಬಂಡೆಕಲ್ಲು ಪತ್ತೆಯಾಗಿ, ಕಾಮಗಾರಿ ನೆನೆಗುದಿಗೆ ಬಿದ್ದಿತ್ತು.
ಇದೀಗ ಕಾಮಗಾರಿಯನ್ನು ತೀವ್ರಗೊಳಿಸಿದ್ದು ಉಡುಪಿಯಿಂದ ಕುಂದಾಪುರಕ್ಕೆ ಹೋಗುವ ಮೇಲ್ ಸೇತುವೆ ಮಾರ್ಗದಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಿಂದಾಗಿ ವಾಹನಗಳ ದಟ್ಟಣೆ ಕಡಿಮೆಯಾಗಲಿದ್ದು ಮುಂದಿನ ದಿನಗಳಲ್ಲಿ, ಅಂಡರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲಾಗುವುದು ಎಂದು ಸ್ಥಳಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭರವಸೆ ನೀಡಿದ್ದಾರೆ. ಅಂಡರ್ ಪಾಸ್ ಕಾಮಗಾರಿ ನಡೆಯುವ ರಸ್ತೆಗೆ ಶೀಘ್ರವೇ ಕಾಂಕ್ರೀಟೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Kshetra Samachara
04/01/2025 04:35 pm