ಹುಬ್ಬಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ಭವಿಷ್ಯದ ಕನಸನ್ನು ಹೊತ್ತಿರುವ ನಾಯಕ, ಒಬ್ಬ ದಲಿತ ನಾಯಕ. ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯುತ್ತಿರುವುದನ್ನು ಕಂಡು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪೂರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ದೀನ ದಲಿತರ ಬಗ್ಗೆ ಶ್ರಮಿಸುವ ನಾಯಕ. ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಬೆಳೆಯುತ್ತಿದ್ದಾರೆ. ಇವರ ಬೆಳವಣಿಗೆ ಸಹಿಸದೇ ಬಿಜೆಪಿ ವಿನಾಕಾರಣ ಆರೋಪ ಮಾಡಿ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮಾಡುತ್ತಿದೆ ಎಂದು ದೂರಿದರು. ಪ್ರಿಯಾಂಕ್ ಖರ್ಗೆಯವರನ್ನು ಎಷ್ಟು ಮುಗಿಸಲು ತಂತ್ರ ಮಾಡುತ್ತಾರೋ ಅಷ್ಟೂ ಎತ್ತರಕ್ಕೆ ಸಚಿವರು ಬೆಳೆಯುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
Kshetra Samachara
04/01/2025 05:35 pm