ಹುಬ್ಬಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಓರ್ವ ಸಮರ್ಥ ಸಚಿವ ಪ್ರಿಯಾಂಕ್ ಖರ್ಗೆಯನ್ನು ಟಾರ್ಗೆಟ್ ಮಾಡಲಾಗುತ್ತದೆ. ಅವರ ವೈಯಕ್ತಿಕ ತೇಜೋವಧೆ ಕೆಲಸ ಆಗುತ್ತಿದೆ ಎಂದರು.
ಸಮರ್ಥ ರಾಜಕಾರಣಿಯನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡುತ್ತಿದೆ. ಆದರೆ ಯಾರು ಏನೇ ಮಾಡಿದರೂ ಪ್ರಿಯಾಂಕ್ ಖರ್ಗೆಯವರನ್ನು ಏನು ಮಾಡಲು ಆಗಲ್ಲ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/01/2025 05:50 pm