ಸಿಡ್ನಿ: ಸಿಡ್ನಿಯಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ದಿನದಾಟದ ಭೋಜನಾ ವಿರಾಮದ ಬಳಿಕ ಬುಮ್ರಾ ದಿಢೀರ್ ಆಗಿ ಡ್ರೆಸ್ಸಿಂಗ್ ರೂಮ್ಗೆ ಮರಳಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಟೀಮ್ ಇಂಡಿಯಾದ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕಾರಿನಲ್ಲಿ ತೆರಳಿದ್ದರು. ಆದರೆ ಇದೀಗ ಜಸ್ಪ್ರೀತ್ ಬುಮ್ರಾ ಅವರಿಗೆ ಏನಾಗಿತ್ತು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.
ಭೋಜನಾ ವಿರಾಮದ ಬಳಿಕ ಓವರ್ ಎಸೆದ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಅವರ ಬೆನ್ನಿನ ಸ್ನಾಯುವಿನಲ್ಲಿ ಸೆಳೆತ ಉಂಟಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆಯ ಸಲುವಾಗಿ ಅವರು ಮೈದಾನದಿಂದ ಹೊರ ನಡೆದಿದ್ದಾರೆ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ನಾಯಕತ್ವ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಇನ್ನೂ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದು, ಭಾರತಕ್ಕೆ ದೊಡ್ಡ ಹಿನ್ನಡೆ ಎಂದರೆ ತಪ್ಪಾಗಲಾರದು. ಹಾಲಿ ಸರಣಿಯಲ್ಲಿ 32 ವಿಕೆಟ್ಗಳನ್ನು ಪಡೆದಿರುವ ಬುಮ್ರಾ ಅನುಪಸ್ಥಿತಿ ಆಸ್ಟ್ರೇಲಿಯಾಗೆ ಪ್ಲಸ್ ಆಗಲಿದ್ದು, ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.
PublicNext
04/01/2025 05:55 pm