ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಾರ್ಥಕ 50 ವರ್ಷ ಪೂರೈಸಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆ

ಧಾರವಾಡ: ಶಿಕ್ಷಣ ಎಂಬುದು ಕತ್ತಲೆಯಿಂದ ಬೆಳಕಿನೆಡೆ... ಅಜ್ಞಾನದಿಂದ ಸುಜ್ಞಾನದೆಡೆಗೆ... ವ್ಯಕ್ತಿಯನ್ನು ಕರೆದುಕೊಂಡು ಬರುವಂತದ್ದು. ಅಂತಹ ಶಿಕ್ಷಣವನ್ನು ಅನೇಕ ಶಿಕ್ಷಣ ಸಂಸ್ಥೆಗಳು ನೀಡುತ್ತಿವೆ. ಆದರೆ, ವೇಮನ ವಿದ್ಯಾವರ್ಧಕ ಸಂಘದ ಶಾರದಾ ಶಿಕ್ಷಣ ಸಮೂಹ ಸಂಸ್ಥೆ ಶಿಕ್ಷಣವಷ್ಟೇ ಅಲ್ಲದೇ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಮೂಲಕ ಸಾರ್ಥಕ 50 ವರ್ಷ ಪೂರೈಸಿ ಸುವರ್ಣ ಮಹೋತ್ಸವ ಸಮಾರಂಭವನ್ನು ಆಚರಿಸಿಕೊಂಡಿದೆ.

ಧಾರವಾಡದ ಹೃದಯ ಭಾಗದಲ್ಲಿ ವಿಶಾಲವಾದ ಜಾಗದಲ್ಲಿ ಸುಸಜ್ಜಿತ ಮೈದಾನ ಹೊಂದಿ ಮೈದಳೆದು ನಿಂತಿರುವ ಶಾರದಾ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಸುವರ್ಣ ಮಹೋತ್ಸವ ಸಮಾರಂಭ ನಡೆಯಿತು.

ಈ ಸಮಾರಂಭಕ್ಕೆ ಸಂಸ್ಥೆ ಮುನ್ನಡೆಸುತ್ತಿರುವ ಹಾಗೂ ರಾಜ್ಯ ಸರ್ಕಾರದ ಪ್ರಭಾವಿ ಸಚಿವರಾಗಿರುವ ಎಚ್.ಕೆ.ಪಾಟೀಲ, ಸಭಾಪತಿ ಬಸವರಾಜ ಹೊರಟ್ಟಿ, ಹೈಕೋರ್ಟ್ ನ್ಯಾಯಮೂರ್ತಿ ರವಿ ಹೊಸಮನಿ, ಹಿರಿಯ ವಕೀಲರಾದ ಕೆ.ಎಲ್.ಪಾಟೀಲ ಹಾಗೂ ಮಾಜಿ ಶಾಸಕ ಡಿ.ಆರ್.ಪಾಟೀಲ ಸಾಕ್ಷಿಯಾದರು.

ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ, ಕೆ.ಎಚ್.ಪಾಟೀಲ, ಎಸ್.ಬಿ.ಪಾಟೀಲ, ಎಸ್.ಆರ್.ಪಾಟೀಲ ಸೇರಿದಂತೆ ಕೆಲ ಹಿರಿಯರು ಕಲಿತು ಈ ಶಿಕ್ಷಣ ಸಂಸ್ಥೆಯನ್ನು ಹುಟ್ಟು ಹಾಕಿದರು.

ಸಂಸ್ಥೆ ಎಲ್ಲಿ ಪ್ರಾರಂಭಿಸಬೇಕು ಎಂಬುದಕ್ಕೆ ಸ್ಥಳ ಇರಲಿಲ್ಲ. ಕೊನೆಗೆ ಈ ಜಾಗ ಸಿಕ್ಕಿತು. ಇಲ್ಲಿ ದೊಡ್ಡ ಕಟ್ಟಡ ನಿರ್ಮಾಣವಾಗಿ ಈ ಭಾಗದ ಎಲ್ಲ ವರ್ಗಗಳಿಗೂ ಮೀಸಲಿರುವಂತೆ ಪ್ರವೇಶ ಕೊಟ್ಟು 500 ಮಕ್ಕಳಿಂದ ಈ ಶಾಲೆ ಮುನ್ನಡೆಯುತ್ತಿದೆ ಎಂದರು.

ವೇಮನ ವಿದ್ಯಾವರ್ಧಕ ಸಂಘದ ಶಾರದಾ ಶಿಕ್ಷಣ ಸಂಸ್ಥೆ ಶಿಕ್ಷಣದ ಜೊತೆ ಜೊತೆಗೆ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತುವ ಕೆಲಸ ಮಾಡುತ್ತಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಈ ಸಂಸ್ಥೆ ಹೆಸರು ಮಾಡಿದೆ. 50 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಂಸ್ಥೆ ಮಾಡಿದ ವಿವಿಧ ಸಾಧನೆಗಳ ಸ್ಮರಣ ಸಂಚಿಕೆಯನ್ನು ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು.

ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಶಾಲಾ ಆವರಣ, ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಸಾಕ್ಷಿಯಾಯಿತು. ಸಂಸ್ಥೆಯ ಸಿಬ್ಬಂದಿ ವರ್ಗ ಹಬ್ಬದಂತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಶಾಲಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಶಾಸಕ ಎನ್.ಎಚ್.ಕೋನರಡ್ಡಿ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/01/2025 06:03 pm

Cinque Terre

68.14 K

Cinque Terre

0

ಸಂಬಂಧಿತ ಸುದ್ದಿ