ಬೆಂಗಳೂರು : ಕಸದ ಲಾರಿ ಹರಿದ ಪರಿಣಾಮ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ನಡೆದಿದೆ.
ನಿಗಾರ್ ಸುಲ್ತಾನ್ (30) ಹಾಗೂ ನಿಗಾರ್ ಇಸ್ಪಾನ್ (32) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಹೆಣ್ಣೂರು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರಿಬ್ಬರೂ ಗೋವಿಂದಪುರದಿಂದ ಥಣಿಸಂದ್ರ ಮಾರ್ಗವಾಗಿ ತೆರಳುತ್ತಿದ್ದಾಗ ಮುಂದೆ ಸಾಗುತ್ತಿದ್ದ ಕಾರಿನ ಚಾಲಕ ಏಕಾಏಕಿ ನಿಲ್ಲಿಸಿದ್ದ, ಅದರಿಂದ ಗಾಬರಿಗೊಂಡ ಸವಾರಿಣಿ ಬಲಕ್ಕೆ ತನ್ನ ಸ್ಕೂಟರ್ ತಿರುಗಿಸಿದ್ದಾಳೆ. ಅದೇ ಸಂದರ್ಭದಲ್ಲಿ ಸ್ಕೂಟರ್ ಹಿಂದಿನಿಂದ ವೇಗವಾಗಿ ಬಂದ ಕಸದ ಲಾರಿ ಡಿಕ್ಕಿಯಾಗಿದೆ.
ಬಳಿಕ ಚಾಲಕನ ನಿಯಂತ್ರಣಕ್ಕೆ ಸಿಗದ ಲಾರಿ ನೆಲಕ್ಕೆ ಬಿದ್ದಿದ್ದ ಮಹಿಳೆಯರ ಮೇಲೆ ಹರಿದಿದೆ. ಪರಿಣಾಮ ಇಬ್ಬರೂ ಮಹಿಳೆಯರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಹೆಣ್ಣೂರು ಸಂಚಾರ ಪೊಲೀಸರು ಭೇಟಿ ನೀಡಿದ್ದು, ಕಸದ ಲಾರಿ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.
PublicNext
04/01/2025 06:06 pm