ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ - ಹಲವು ಕಾರ್ಯಕ್ರಮ: ಕೇಶವ ಕಾಮತ್

ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಕುವೆಂಪು ರಚಿಸಿರುವ ‘ನಾಡಗೀತೆಗೆ ನೂರು ವರ್ಷ’ ಸಹಸ್ರ ಕಂಠ ಗಾಯನ ಕಾರ್ಯಕ್ರಮವು ನಡೆಯಿತು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನೋತ್ಸವ ಹಾಗೂ ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ ಪ್ರಯುಕ್ತ ನಾಡಗೀತೆ ಸಹಸ್ರ ಕಂಠ ಗಾಯನ ಕಾರ್ಯಕ್ರಮ ಜರುಗಿತು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ನಾಡು ಕಂಡ ಶ್ರೇಷ್ಠ ಕವಿ ಕುವೆಂಪು ಅವರು ನಾಡಗೀತೆ ರಚಿಸಿ ನೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಸಹಸ್ರ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶಾಲಾ ಕಾಲೇಜು ಹಂತದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಕುವೆಂಪು ಅವರು ನಾಡಿಗೆ ನೀಡಿದ ಕೊಡುಗೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು. 1924-25 ರ ಅವಧಿಯಲ್ಲಿ ಕುವೆಂಪು ಅವರ ಆತ್ಮಕಥೆ ‘ನೆನಪಿನ ದೋಣಿ’ಯಲ್ಲಿ ಉಲ್ಲೇಖಿಸಿರುವಂತೆ ‘ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ನಾಡಗೀತೆಯನ್ನು ರಚಿಸಿ ಕನ್ನಡ ನಾಡಿನ ಸಮೃದ್ಧಿಯನ್ನು ಕಟ್ಟಿಕೊಟ್ಟಿದ್ದಾರೆ ಎಂದು ಟಿ.ಪಿ.ರಮೇಶ್ ಅವರು ನುಡಿದರು. 1925ರ ಸುಮಾರಿಗೆ ಭಾರತ ಒಂದು ಗಣರಾಜ್ಯವಾಗಿ ಭಾಷಾವಾರು ಪ್ರಾಂತ್ಯ ರಚನೆ, ಕನ್ನಡ ನಾಡು ಏಕೀಕರಣವಾಗಿ ಕರ್ನಾಟಕ ಹೆಸರು ನಾಮಕರಣ ಹೀಗೆ ಕನ್ನಡ ನಾಡು, ಭಾಷೆ ಬೆಳವಣಿಗೆಗೆ ಕುವೆಂಪು ಅವರು ಶ್ರಮಿಸಿದ್ದಾರೆ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

04/01/2025 06:57 pm

Cinque Terre

280

Cinque Terre

0