ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ನಿಯಂತ್ರಣಕ್ಕೆ - ಸಮಗ್ರ ಯೋಜನೆ ರೂಪಿಸಿ, ತುಷಾರ್ ಗಿರಿನಾಥ್

ಬೆಂಗಳೂರು: ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ಸೇರಿ ಕಲುಷಿತ ಆಗುವುದನ್ನು ತಪ್ಪಿಸುವ ಸಲುವಾಗಿ ಸಮಗ್ರ ಯೋಜನೆ ರೂಪಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್‌ರವರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೃಷಭಾವತಿ ವ್ಯಾಲಿ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಸೇರಿ ಕಲುಷಿತ ಆಗುತ್ತಿದ್ದು, ಅದನ್ನು ತಡೆಯುವ ಸಲುವಾಗಿ ಪಾಲಿಕೆ, ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಸಮಗ್ರ ಯೋಜನೆ ರೂಪಿಸಲು ಸೂಚನೆ ನೀಡಿದರು.

ವೃಷಭಾವತಿ ವ್ಯಾಲಿಗೆ ಎಲ್ಲೆಲ್ಲಿ ಕೊಳಚೆ ನೀರು ಬರುತ್ತಿದೆ ಎಂಬುದನ್ನು ಪರಿಶೀಲಿಸಿ ಪಟ್ಟಿ ಮಾಡಬೇಕು. ಅಲ್ಲದೆ ನದಿ ಪಕ್ಕದಲ್ಲಿ ಎಷ್ಟು ಅಪಾರ್ಟ್ಮೆಂಟ್ ಗಳು ಬರಲಿವೆ, ಖಾಸಗಿ ಅಪಾರ್ಟ್ಮೆಂಟ್ ಗಳಿಂದ ನೇರವಾಗಿ ಬರುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಜೊತೆಗೆ ಅಪಾರ್ಟ್ಮೆಂಟ್ ಗಳಲ್ಲಿ ಅಳವಡಿಸಿರುವ ತ್ಯಾಜ್ಯನೀರು ಸಂಸ್ಕರಣಾ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲನೆ ನಡೆಸಲು ಸೂಚನೆ ನೀಡಿದರು.

ಜಲಮಂಡಳಿ ವತಿಯಿಂದ ಎಷ್ಟು ಎಸ್.ಟಿ.ಪಿ ಗಳು ಕಾರ್ಯನಿರ್ವಹಿಸುತ್ತಿವೆ, ಹೊಸದಾಗಿ ಎಸ್.ಟಿಪಿಗಳನ್ನು ನಿರ್ಮಾಣ ಮಾಡಲು ಯಾವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂಬುದರ ವಿವರವಾದ ಮಾಹಿತಿ ನೀಡಬೇಕು. ಅಲ್ಲದೆ ಕೊಳಚೆ ನೀರು ನದಿಗೆ ಸೇರುತ್ತಿರುವುದನ್ನು ಗುರುತಿಸಿ ಅದನ್ನು ಪೈಪ್‌ಗಳ ಮೂಲಕ ಎಸ್.ಟಿ.ಪಿಗೆ ಹೋಗುವ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ವೃಷಭಾವತಿ ವ್ಯಾಲಿಗೆ ಒಂದಿಕೊಂಡಂತೆ 42 ಕೆರೆಗಳು ಬರಲಿದ್ದು, ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಬೇಕು. ಜಿಲ್ಲಾಧಿಕಾರಿಗಳ ಬಳಿ ಬಾಕಿಯಿರುವ ಪ್ರಕರಣಗಳ ಪೈಕಿ ಭೂಮಾಪಕರಿಂದ ಸಮೀಕ್ಷೆ ನಡೆಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೃಷಭಾವತಿ ವ್ಯಾಲಿಗೆ ಕಸ ಹಾಕದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಫೆನ್ಸಿಂಗ್ ಅಳವಡಿಸುವ ಕೆಲಸ ಮಾಡಬೇಕು. ಇನ್ನು ಜೆಸಿಬಿಗಳನ್ನು ಇಟ್ಟು ಹೂಳೆತ್ತುವ ಕಾರ್ಯವನ್ನು ನಡೆಸಬೇಕು. ವೃಷಭಾವತಿ ವ್ಯಾಲಿಯಲ್ಲಿ ಸಂಪೂರ್ಣವಾಗಿ ಹೂಳೆತ್ತಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ 28.08 ಕಿ.ಮೀ ವ್ಯಾಪ್ತಿಯಲ್ಲಿ ವೃಷಭಾವತಿ ವ್ಯಾಲಿ ಬರಲಿದೆ. ವಿ-100 ವ್ಯಾಲಿ ಸ್ಯಾಂಕಿ ಕೆರೆಯಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಬರದಲಿದ್ದು, ವಿ-200 ವ್ಯಾಲಿ ಗೊರಗುಂಟೆ ಪಾಳ್ಯ(ಪೀಣ್ಯ ಮೆಟ್ರೊ ನಿಲ್ದಾಣ)ದಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಬರಲಿದೆ.

ಈ ವೇಳೆ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ರಮ್ಯಾ, ಪ್ರಧಾನ ಅಭಿಯಂತರರಾದ ಡಾ. ಬಿ.ಎಸ್ ಪ್ರಹ್ಲಾದ್, ಕೆರೆಗಳ ವಿಭಾಗದ ಮುಖ್ಯ ಆಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಪಾಲಿಕೆ, ಜಲಮಂಡಳಿ, ಕೆ.ಎಸ್.ಪಿ.ಸಿ.ಬಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/01/2025 07:02 pm

Cinque Terre

544

Cinque Terre

0

ಸಂಬಂಧಿತ ಸುದ್ದಿ