ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷ್ಣನಗರಿ ತುಂಬಾ ಕುಡುಕರ ಹಾವಳಿ- ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ

ಉಡುಪಿ: ಉಡುಪಿಯ ಬಸ್ ನಿಲ್ದಾಣಗಳಲ್ಲಿ ಹೊರಜಿಲ್ಲೆಗಳ ವಲಸೆ ಕಾರ್ಮಿಕರು ವಿಪರೀತ ಪಾನಮತ್ತರಾಗಿ ಬಿದ್ದಿರುವುದು ಕಂಡುಬರುತ್ತಿದೆ. ಇದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀರಾ ತೊಂದರೆ ಎದುರಿಸುವಂತಾಗಿದೆ.

ಸಂಜೆಯಾಗುತ್ತಲೇ ಉಡುಪಿ ಸಿಟಿ ಬಸ್ ನಿಲ್ದಾಣ, ನರ್ಮ್ ಬಸ್ ನಿಲ್ದಾಣ ಸೇರಿದಂತೆ ಸುತ್ತಮತ್ತಲು ಮದ್ಯ ವ್ಯಸನಿ ಕಾರ್ಮಿಕರು ಪಾನಮತ್ತರಾಗಿ ಪರಸ್ಪರ ಗಲಾಟೆ ಮಾಡುವುದು, ಕಚ್ಚಾಡಿಕೊಳ್ಳುವುದು, ಹೊಡೆದಾಡಿಕೊಳ್ಳುತ್ತಿದ್ದಾರೆ. ಇದೀಗ ಇವರು ಸ್ಥಳೀಯರ ಮೇಲೂ ಏರಿ ಬರುತ್ತಿರುವುದು ಕಂಡುಬಂದಿದೆ.

ಅಲ್ಲೇ ಮಲಗುವುದು, ಅಲ್ಲೇ ಊಟ, ಅಲ್ಲೇ ಮದ್ಯ ಸೇವನೆ, ಅಲ್ಲಿಯೇ ಜೂಜಾಡುತ್ತಾರೆ. ಮತ್ತೆ ವಿನಾಕಾರಣ ಗಲಾಟೆ ಮಾಡಿಕೊಳ್ಳುತ್ತಾರೆ. ಇವರು ಕುಡಿದ ಮದ್ಯದ ಬಾಟಲಿ, ತಿಂದ ವಸ್ತುಗಳನ್ನು ಅಲ್ಲಿಯೇ ಎಸೆದು ಗಲೀಜು ಮಾಡುತ್ತಿದ್ದಾರೆ. ಒಟ್ಟಾರೆ ರಾತ್ರಿಯಾಗುತ್ತಿದ್ದಂತೆ ಈ ಸ್ಥಳಗಳು ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ಕೂಡಲೇ ಪೊಲೀಸ್ ಇಲಾಖೆ ಹಾಗೂ ನಗರಸಭೆ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂಜೆ ಪೊಲೀಸರು ಇಲ್ಲಿ ಗಸ್ತು ತಿರುಗಾಡಬೇಕು. ಬಸ್ ನಿಲ್ದಾಣಗಳಿಗೆ ಸೆಕ್ಯುರಿಟಿ ಗಾರ್ಡ್‌ಗಳನ್ನು ನೇಮಕ ಮಾಡಬೇಕು. ಅಲ್ಲಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಬಸ್ ನಿಲ್ದಾಣದಲ್ಲಿ ಕುಡಿದು ಮಲಗಿ ಅಸಹ್ಯವಾಗಿ ವರ್ತಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಗಣೇಶ್‌ರಾಜ್‌ ಸರಳೇಬೆಟ್ಟು ಒತ್ತಾಯಿಸಿದ್ದಾರೆ.

Edited By : Shivu K
Kshetra Samachara

Kshetra Samachara

04/01/2025 07:04 pm

Cinque Terre

29.74 K

Cinque Terre

3

ಸಂಬಂಧಿತ ಸುದ್ದಿ