ಕಾರವಾರ : ಜಿಲ್ಲೆಯಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಸೂಕ್ತ ರೀತಿಯಲ್ಲಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳೊಮದಿಗೆ ಚರ್ಚಿಸಿದ್ದೇವೆ ಎಮದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಧಿಕಾರಿಗಳೊಂದಿಗೆ ಕೇಂದ್ರ ಸರಕಾರದ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆನಡೆಸಿದ್ದೇವೆ. ಯೋಜನೆಗಳ ಕುರಿತು ಅರ್ಹ ಫಲಾನುಭವಿಗಳಿಗೆ ತಿಳಿಸಿ ಸೌಭ್ಯ ತಲುಪುವಂತೆ ಕಾರ್ಯ ನಿರ್ವಹಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೇಂದ್ರ ಸರಕಾರದ ಯೋಜನೆಗಳಾದ ಆಯುಷ್ಮಾನ್ ಭಾರತ, ಮುದ್ರಾ, ಪಿಎಂ ಸ್ವನಿಧಿ, ಪ್ರಧಾನ ಮಂತ್ರಿ ಆವಾಸ್, ವಿಶ್ವಕರ್ಮ, ಜನಧನ, ಸುರಕ್ಷಾ ಭೀಮಾ, ಜೀವನ್ ಭೀಮಾ, ಹವಾಮಾನ ಆಧಾರಿತ ಭೀಮಾ ಯೋಜನೆ, ಫಸಲ್ ಭೀಮಾ ಯೋಜನೆಗಳ ಕುರಿತು ಫಲಾನುಭವಿಗಳಿಗೆ ಜಾಗೃತಿ ಮೂಡಿಸಬೇಕು.
ಅಲ್ಲದೆ ಇದರ ಪ್ರಯೋಜನವನ್ನು ಜಿಲ್ಲೆಯ ಜನರು ಹೆಚ್ಚು ಪಡೆದುಕೊಳ್ಳುವಂತೆ ಕೆಲಸ ಮಾಡಬೇಕು. ಕೆಲವು ಯೋಜನೆಗಳನ್ನು ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆದರೆ ಇನ್ನು ಕೆಲವು ಯೋಜನೆಗಳ ಅನುಷ್ಠಾನದಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಈ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸ್ಪಷ್ಠನೆ ಹಾಗೂ ಮಾಹಿತಿ ನೀಡುವ ವಿಶೇಷ ಪ್ರಯತ್ನ ಮಾಡಬೇಕು. ಈ ಕಾರ್ಯಕ್ಕೆ ಜಿಲ್ಲಾಡಳಿತದ ಜತೆಗೆ ಕೆಲಸ ಮಾಡುತ್ತೇವೆ ಎಂದರು.
PublicNext
04/01/2025 07:13 pm