ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಸಂಸತ್ ಅಧಿವೇಶನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಜನವರಿ 09ರಂದು ಹುಬ್ಬಳ್ಳಿಯನ್ನು ಸಂಪೂರ್ಣ ಬಂದ್ ಮಾಡಲು ಕರೆ ಕೊಟ್ಟಿವೆ. ಕೇಂದ್ರ ಸಚಿವರ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವ ಹುಬ್ಬಳ್ಳಿಯ ವಿವಿಧ ಸಂಘಟನೆಗಳು ಈಗ ಬಂದ್ ಮೂಲಕ ಸರ್ಕಾರಕ್ಕೆ ಬಿಗ್ ಶಾಕ್ ನೀಡಲು ಮುಂದಾಗಿವೆ.
ಕಳೆದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಮಹಾನ್ ಮಾನವತಾವಾದಿಯನ್ನು ಉದ್ದೇಶಿಸಿ ದೇವರೇ ಶ್ರೇಷ್ಟ ಎಂಬ ಹೀನ ಮಾತಿನ ವಿರುದ್ಧ ವಿವಿಧ ದಲಿತ ಸಂಘಟನೆಗಳು ಹಾಗೂ ಅಂಬೇಡ್ಕರ್ ಅಭಿಮಾನಿಗಳ ಬಳಗ ಈಗ ಹೋರಾಟದ ಕಿಚ್ಚನ್ನು ಹೊತ್ತಿಸಿದ್ದಾರೆ. ಹು-ಧಾ ಪೂರ್ವ ವಿಧಾನಸಭಾ ಮೀಸಲು(ಪಜಾ)ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಜನವರಿ 09 ರಂದು ಸಂಪೂರ್ಣ ಹುಬ್ಬಳ್ಳಿಯನ್ನು ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ. ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ಕೂಡಲೇ ವಜಾ ಮಾಡುವಂತೆ ಒತ್ತಾಯಿಸಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈಗಾಗಲೇ ನೂರಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದಾರೆ.
ಬೈಟ್: ಗುರುನಾಥ ಉಳ್ಳಿಕಾಶಿ, ಹೋರಾಟಗಾರರು
ಬುದ್ಧ-ಬಸವ-ಅಂಬೇಡ್ಕರ್ ವಾದಿಗಳು, ಆಟೋ, ಕ್ಯಾಬ್,ಟ್ಯಾಕ್ಸಿ, ಸಂಘಟನೆಗಳ ವ್ಯಾಪಾರಸ್ಥರು, ಕನ್ನಡಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಸಭೆ ನಡೆಸಿ ನಿರ್ಧಾರ ಮಾಡಲಾಗಿದ್ದು, ಹುಬ್ಬಳ್ಳಿ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಬೆಂಬಲದ ಸೂಚನೆ ನೀಡಿದ್ದು, ಶಾಂತಿಯುತ ಬಂದ್ ಮಾಡುವಂತೆ ಕರೆ ನೀಡಿದ್ದಾರೆ.
ಬೈಟ್: ಪ್ರಸಾದ್ ಅಬ್ಬಯ್ಯ, ಶಾಸಕರು
ಒಟ್ಟಿನಲ್ಲಿ ಅಮಿತ್ ಶಾ ವಿರುದ್ಧ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಹುದೊಡ್ಡ ಕಿಚ್ಚು ಹತ್ತಿದೆ. ಹೋರಾಟದ ಕಾವು ನಿಜಕ್ಕೂ ಬಹುದೊಡ್ಡ ಬಿಸಿಯನ್ನು ಮುಟ್ಟಿಸುವುದಂತೂ ಸತ್ಯ. ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ.
ಮಲ್ಲೇಶ್ ಸೂರಣಗಿ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/01/2025 07:19 pm