ಶಿರಹಟ್ಟಿ: ರಾತ್ರಿ ಸಮಯದಲ್ಲಿ ಜಮೀನಿಗೆ ತೆರಳಿದ್ದಾಗ ದೂರದಿಂದ ಚಿರತೆ ಕಂಡು ಅದನ್ನು ವಿಡಿಯೋ ಮಾಡಿ ಭಯಭೀತರಾದ ಘಟನೆ ಕುರಿತು ಪ್ರತ್ಯಕ್ಷದರ್ಶಿ ಪರಶುರಾಮ ಪ್ಯಾಟಿ ಎಂಬಾತ ಯುವಕ ತಿಳಿಸಿದ್ದಾರೆ.
ಶಿರಹಟ್ಟಿ ತಾಲೂಕಿನ ರಣತೂರ ಗ್ರಾಮದಲ್ಲಿ ರಾತ್ರಿ ಸಮಯದಲ್ಲಿ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ ಅರಣ್ಯ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗನೆ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರು ಆತಂಕವನ್ನು ದೂರ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಪಬ್ಲಿಕ್ ನೆಕ್ಸ್ಟ್ ವಿಶೇಷ: ಗೌರೀಶ ನಾಗಶೆಟ್ಟಿ ಶಿರಹಟ್ಟಿ
Kshetra Samachara
04/01/2025 07:28 pm