ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡದಲ್ಲಿಯೂ ಬಿಡುಗಡೆಯಾಗ್ತಿದೆ 'ರಾಮ್ ಚರಣ್' ಸಿನಿಮಾ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಗೂ ಆರ್.ಶಂಕರ್ ಕಾಂಬಿನೇಷನ್ 'ಗೇಮ್ ಚೇಂಜರ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿ, ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ನಡೆದ ಟ್ರೈಲರ್ ರಿಲೀಸ್ ಕಾರ್ಯಕ್ರಮಕ್ಕೆ ನಿರ್ದೇಶಕ ರಾಜಮೌಳಿ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. 2 ನಿಮಿಷ 40 ಸೆಕೆಂಡ್ ಗಳಿರುವ ಗೇಮ್ ಚೇಂಜರ್ ಟ್ರೈಲರ್‌ನಲ್ಲಿ ರಾಮ್ ಚರಣ್ ಡಬಲ್ ರೋಲ್ ನಲ್ಲಿ ಅಬ್ಬರಿಸಿದ್ದಾರೆ. ಒಮ್ಮೆ ರಾಜಕಾರಣಿ ಪಾತ್ರದಲ್ಲಿ, ಇನ್ನೊಂದು ಐಎಎಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಐಎಎಸ್ ಅಧಿಕಾರಿಯಾಗಿ ರಾಜಕೀಯದಲ್ಲಿ ನಡೆಯುವ ಭ್ರಷ್ಟಾಚಾರದ ವಿರುದ್ಧ ರಾಮ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಟ್ರೈಲರ್‌ನಲ್ಲಿ ಕಟ್ಟಿಕೊಡಲಾಗಿದೆ. ಇದರೊಂದಿಗೆ ಆಕ್ಷನ್ ದೃಶ್ಯಗಳು ಅಬ್ಬರಿಸಿರುವ ಚೆರ್ರಿಗೆ ಜೋಡಿಯಾಗಿ ನಟಿ ಕಿಯಾರಾ ಅಡ್ವಾಣಿ ಮಿಂಚಿದ್ದಾರೆ.

Edited By : Shivu K
PublicNext

PublicNext

04/01/2025 07:43 pm

Cinque Terre

112.19 K

Cinque Terre

0