ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಸಾರ್ವಜನಿಕರ ಸಮಸ್ಯೆ ಆಲಿಸಿದ ಸಂಸದ - ಕೋಟಾ ಪೂಜಾರಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ಪಟ್ಟಣದ ಬಿಜೆಪಿ ಕಚೇರಿಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿದ್ದರು. ಈ ವೇಳೆ ತಾಲೂಕಿನ ಜನರು ತಮ್ಮ ಸಮಸ್ಯೆಯನ್ನು ಸಂಸದರ ಬಳಿ ಹೇಳಿಕೊಳ್ಳಲು ನೂರಾರು ಜನರು ಬಂದಿದ್ದರು. ಅದರಲ್ಲೂ ಅರಣ್ಯ ಭೂಮಿ ಸಮಸ್ಯೆ, ರಸ್ತೆ, ಕುಡಿಯುವ ನೀರಿನ ಸಂಪರ್ಕ, ವಿದ್ಯುತ್ ಸಮಸ್ಯೆಯನ್ನು ಸಂಸದರು ಆಲಿಸಿದರು.

ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ್ದು. ಮತ್ತಷ್ಟು ಸಮಸ್ಯೆಗಳನ್ನು ಅಧಿಕಾರಿಗಳಿಗೆ ಪರಿಹಾರಿಸುವಂತೆ ಸೂಚನೆ ನೀಡಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಪೂಜಾರಿ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ರು.

Edited By : PublicNext Desk
Kshetra Samachara

Kshetra Samachara

04/01/2025 07:56 pm

Cinque Terre

1.04 K

Cinque Terre

0

ಸಂಬಂಧಿತ ಸುದ್ದಿ