ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು : 'ವಿದ್ಯಾರ್ಥಿಗಳಿಗೆ ಗಣಿತವೆಂಬುದು ಕಬ್ಬಿಣದ ಕಡಲೆಯಂತಾಗಿದೆ‌'

ಹಿರಿಯೂರು :ವಿದ್ಯಾರ್ಥಿಗಳು ಗಣಿತ ವಿಷಯದ ಅಭ್ಯಾಸ ಪುಸ್ತಕ ವಿದ್ಯಾರ್ಥಿಗಳಿಗೆ ಗಣಿತವೆಂಬುದು ಕಬ್ಬಿಣದ ಕಡಲೆಯಂತಾಗಿದ್ದು, ಗಣಿತ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಈ ಭಯವನ್ನು ನಿವಾರಿಸುವ ಉದ್ದೇಶದಿಂದ ಗಣಿತದ ಗಣಿ ಬಿಡಿಸಿದಷ್ಟೂ ಅಂಕ ಎಂಬ 10 ನೇ ತರಗತಿಯ ಗಣಿತ ವಿಷಯದ ಅಭ್ಯಾಸ ಪುಸ್ತಕ ಬಿಡುಗಡೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಪುಸ್ತವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ನಗರದ ತುಳಸಿ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಗಣಿತ ಶಿಕ್ಷಕರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ “ಗಣಿತದ ಗಣಿ ಬಿಡಿಸಿದಷ್ಟೂ ಅಂಕ” ಎಂಬ 10 ನೇ ತರಗತಿಯ ಗಣಿತ ವಿಷಯದ ಅಭ್ಯಾಸ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಇನ್ನೇನು ಕೆಲವೇ ದಿನಗಳಲ್ಲಿ 10 ನೇ ತರಗತಿ ವಿದ್ಯಾರ್ಥಿಗಳು ಪಬ್ಲಿಕ್ ಪರೀಕ್ಷೆಯನ್ನು ಎದುರಿಸಬೇಕಾಗಿದ್ದು, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಸತತ ಪರಿಶ್ರಮದಿಂದ ಗಣಿತ ವಿಷಯ ಸೇರಿದಂತೆ ಎಲ್ಲಾ ವಿಷಯಗಳನ್ನು ಅಭ್ಯಾಸವನ್ನು ಮಾಡುವ ಮೂಲಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆಯಬೇಕು ಎಂಬುದಾಗಿ ಸಚಿವರು ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ನಗರಸಭೆ ಉಪಾಧ್ಯಮಕ್ಷೆ ಶ್ರೀಮತಿ ಅಂಬಿಕಾ ಆರಾಧ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ, ಬಿ.ಆರ್.ಸಿ.ತಿಪ್ಪೇರುದ್ರಪ್ಪ, ಜಿ.ಪಂ. ಮಾಜಿ ಸದಸ್ಯ ನಾಗೇಂದ್ರ ನಾಯ್ಕ, ನಗರಸಭೆ ಸದಸ್ಯ ಈರಲಿಂಗೇಗೌಡ, ಕಾಂಗ್ರೆಸ್ ಮುಖಂಡ ಸರಗೊಂಡನಹಳ್ಳಿ ಕೃಷ್ಣಮೂರ್ತಿ, ಫಕ್ರುದ್ದೀನ್ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಗಣಿತಶಿಕ್ಷಕರ ಸಂಘದ ಅಧ್ಯ ಕ್ಷರು ಹಾಗೂ ಸದಸ್ಯರುಗಳು, ಪದಾಧಿಕಾರಿಗಳು, ಎಲ್ಲಾ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/01/2025 08:10 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ