ಬೆಳಗಾವಿ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಸಂಸತ್ ನಲ್ಲಿ ಅವಹೇಳನ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ದಲಿತ ಸಂಘಟನೆಯಿಂದ ಕೇಂದ್ರ ಸಚಿವ ಅಮಿತ್ ಷಾ ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಆಟೋ ರಿಕ್ಷಾ ಮೇಲೆ ಅಮಿತ್ ಶಾ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಿದ್ರು. ಅಂಬೇಡ್ಕರ್ ಅವರ ಕುರಿತು ಮಾತನಾಡಿದ ಹೇಳಿಕೆ ವಾಪಾಸ್ ಪಡೆದು ಕ್ಷಮೆ ಕೇಳುವಂತೆ ಒತ್ತಾಯಿಸಿದ್ರು. ಬಳಿಕ ಅಣುಕು ಶವಯಾತ್ರೆ ಮುಂದೆ ಪಟಾಕಿ ಸಿಡಿಸಲಾಯಿತು. ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ್‍ಯಾಲಿ ಮೂಲಕ ಡಿಸಿಗೆ ಮನವಿ ಸಲ್ಲಿಸಲಾಯಿತು.
PublicNext
04/01/2025 08:12 pm