ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮೀನುಗಾರಿಕೆ ನಡೆಸುತ್ತಿದ್ದಾಗ ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

ಉಡುಪಿ: ಗಂಗೊಳ್ಳಿ ಗ್ರಾಮದ ನಾರಾಯಣ ಮೊಗವೀರ (58) ಎಂಬವರು ಮೀನುಗಾರಿಕೆ ಮಾಡುತ್ತಿದ್ದಾಗ ಬೋಟ್ ನಿಂದ ಆಯತಪ್ಪಿ ಬಿದ್ದು ಸಮುದ್ರಪಾಲಾದ ಘಟನೆ ಸಂಭವಿಸಿದೆ.

ಇವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಬೋಟ್‌ನಲ್ಲಿ ಗಂಗೊಳ್ಳಿ ಬಂದರ್‌ನಿಂದ ಸಮುದ್ರಕ್ಕೆ ಮೀನುಗಾರಿಕೆಗೆಂದು ಹೋಗಿದ್ದರು. ಅರಬ್ಬಿ ಸಮುದ್ರದಲ್ಲಿ ಬೋಟಿನಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕಾಣೆಯಾಗಿದ್ದಾರೆ. ಈ ಬಗ್ಗೆ ಅವರ ಸಹೋದರ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

04/01/2025 08:13 pm

Cinque Terre

1.83 K

Cinque Terre

0

ಸಂಬಂಧಿತ ಸುದ್ದಿ