ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಸಚಿನ್, ರುದ್ರೇಶ್ ಆತ್ಮಹತ್ಯೆ ಪ್ರಕರಣ & ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಹಾಗೂ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎಸ್ ಡಿಎ ನೌಕರ ರುದ್ರೇಶ್ ಯಡವಣ್ಣವರ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಹಾಗೂ ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ಇಂದು ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡುವ ಮುನ್ನ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಮುಖ್ಯಮಂತ್ರಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದರು.

ಬೆಳಗಾವಿಯಲ್ಲಿ ಎಸ್ ಡಿಎ ನೌಕರ ರುದ್ರೇಶ್ ಯಡವಣ್ಣವರ ತಹಶೀಲ್ದಾರ್ ಕಚೇರಿಯಲ್ಲಿಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಹೆಸರು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣದ ಪ್ರಮುಖ ಆರೋಪಿ ತಹಶೀಲ್ದಾರ್ ಬಸವರಾಜ ನಾಗರಾಳ ಜಾಮೀನು ಪಡೆದು ರಾಜಾರೋಷವಾಗಿ ಕಚೇರಿಗೆ ಬರುತ್ತಿದ್ದಾರೆ. ಅವರ ಮೇಲೂ ಕ್ರಮ ಜರುಗಿಸಿಲ್ಲ.

ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಸರಕಾರದಲ್ಲಿ ಅಧಿಕಾರಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದು ನಿಲ್ಲಬೇಕು ಎಂದು ಒತ್ತಾಯಿಸಿದರು. ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂವುಗಳನ್ನು ನೀಡಿ ವಿನೂತನವಾಗಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

Edited By : Manjunath H D
PublicNext

PublicNext

04/01/2025 08:20 pm

Cinque Terre

30.47 K

Cinque Terre

0

ಸಂಬಂಧಿತ ಸುದ್ದಿ